ಅಕ್ಷರ ಗಾತ್ರ

ಹಾಸನಾಂಬೆ ದೇಗುಲದತ್ತ ಭಕ್ತರ ಮಹಾಪೂರ; ಮುಂಜಾನೆಯಿಂದಲೇ ದೇವಿಯ ದರ್ಶನಕ್ಕೆ ಕಾದ ಭಕ್ತರು!

ಹಾಸನಾಂಬೆ ದೇಗುಲದಲ್ಲಿ ದೇವಿಯ ದರ್ಶನಕ್ಕೆ ಸರತಿ ಸಾಲಿನಲ್ಲಿ ಕಾಯುತ್ತಿರುವ ಭಕ್ತರು

ಹಾಸನ: ಎತ್ತ ನೋಡಿದರೂ ಭಕ್ತರೇ ಭಕ್ತರು… ದೇವಿಯ ದರ್ಶನಕ್ಕಾಗಿ ಕಿಲೋಮೀಟರ್‌ಗಟ್ಟಲೆ ಉದ್ದನೆಯ ಸರತಿ ಸಾಲು…

ಹೌದು, ಹಾಸನದ ಹಾಸನಾಂಬೆ ದೇಗುಲದಲ್ಲಿ ಭಕ್ತರ ಮಹಾಪೂರವೇ ಹರಿದುಬರುತ್ತಿದೆ. ಸಾರ್ವಜನಿಕ ದರ್ಶನ ಆರಂಭವಾಗಿ ಐದು ದಿನಗಳಾಗಿದ್ದು, ಮಂಗಳವಾರವೂ ದೇವಿಯ ದರ್ಶನ ಪಡೆಯಲು ಸಾವಿರಾರು ಭಕ್ತರು ಆಗಮಿಸಿದ್ದಾರೆ.

ಮುಂಜಾನೆಯೇ ದೇವಸ್ಥಾನದತ್ತ ಭಕ್ತರು ಹೆಜ್ಜೆ ಹಾಕಿದ್ದು, ದರ್ಶನಕ್ಕಾಗಿ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಧರ್ಮದರ್ಶನದ ಸರದಿಯಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ದೇವಸ್ಥಾನದ ಆವರಣ ಮಾತ್ರವಲ್ಲದೆ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಜನದಟ್ಟಣೆ ಕಂಡುಬಂದಿದೆ.

ಈ ಬಾರಿ ಹಾಸನಾಂಬೆ ದರ್ಶನಕ್ಕೆ ಭಕ್ತರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಳೆದ ನಾಲ್ಕು ದಿನಗಳಲ್ಲೇ ಬರೋಬ್ಬರಿ ಎಂಟು ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಇದೀಗ ಐದನೇ ದಿನವೂ ಭಕ್ತರ ಮಹಾಪೂರ ಮುಂದುವರಿದಿದ್ದು, ಹಾಸನ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಸಂಪಾದಕರು (Editor)

ಕರ್ನಾಟಕದ ರಾಜಕೀಯ, ಆಡಳಿತ, ವಿಧಾನಸೌಧ ಹಾಗೂ ಚುನಾವಣಾ ವಿದ್ಯಮಾನಗಳನ್ನು 10+ ವರ್ಷಗಳಿಂದ ವರದಿ ಮಾಡುತ್ತಿರುವ ಹಿರಿಯ ಪತ್ರಕರ್ತರು. Senior Political Correspondent covering Karnataka state politics, governance, and policy with over a decade of journalistic experience.