ಬ್ರಹ್ಮಾವರ: ಹಣಕಾಸಿನ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿದೆ.
ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ರೌಡಿಶೀಟರ್ ಸುಜಿತ್ ಪಿಂಟೊ (43) ಅವರನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಿಕ್ಷಾ ಚಾಲಕ ಪ್ರಮೋದ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುಜಿತ್ ಪಿಂಟೊ ಮತ್ತು ಪ್ರಮೋದ್ ನಡುವೆ ಹಣ ಪಾವತಿ ವಿಚಾರವಾಗಿ ಭಿನ್ನಾಭಿಪ್ರಾಯ ಉಂಟಾಗಿತ್ತು ಎನ್ನಲಾಗಿದೆ. ಇಬ್ಬರೂ ಮದ್ಯದ ಅಮಲಿನಲ್ಲಿದ್ದ ಸಂದರ್ಭದಲ್ಲಿ ಇದೇ ವಿಚಾರವಾಗಿ ಜಗಳ ಆರಂಭವಾಗಿದ್ದು, ಬಳಿಕ ಹೊಡೆದಾಟಕ್ಕೆ ತಿರುಗಿದೆ. ಈ ವೇಳೆ ಪ್ರಮೋದ್ ಕಬ್ಬಿಣದ ರಾಡ್‌ನಿಂದ ಸುಜಿತ್ ಅವರ ತಲೆಗೆ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ. ತೀವ್ರವಾಗಿ ಗಾಯಗೊಂಡ ಸುಜಿತ್ ಮೃತಪಟ್ಟಿದ್ದಾರೆ.
ಹಿಂದೆಯೂ ಕೊಲೆ ಪ್ರಕರಣಗಳಲ್ಲಿ ಹೆಸರು:

ಸುಜಿತ್ ಪಿಂಟೊ ಈ ಹಿಂದೆ ಹಲವು ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದರು ಎನ್ನಲಾಗಿದೆ. 2018ರ ಗುರುಪ್ರಸಾದ್ ಭಟ್ ಕೊಲೆ ಪ್ರಕರಣ ಮತ್ತು 2020ರ ಯೋಗೀಶ್ ಪೂಜಾರಿ ಕೊಲೆ ಪ್ರಕರಣಗಳಲ್ಲೂ ಅವರ ಹೆಸರು ಕೇಳಿಬಂದಿತ್ತು.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬ್ರಹ್ಮಾವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಮೋದ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು, ಹಣಕಾಸಿನ ವ್ಯವಹಾರ ಹಾಗೂ ಕೊಲೆಗೆ ಕಾರಣವಾದ ಸಂದರ್ಭಗಳ ಕುರಿತು ತನಿಖೆ ನಡೆಸುತ್ತಿದ್ದಾರೆ.