ಬಾಲಿವುಡ್‌ನ ದಿಗ್ಗಜ ನಟ ನಾನಾ ಪಾಟೇಕರ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ..! ತಮ್ಮ ವಿಶಿಷ್ಟ ಅಭಿನಯ, ಖಡಕ್ ಡೈಲಾಗ್ ಹಾಗೂ ಅದ್ಭುತ ವ್ಯಕ್ತಿತ್ವದಿಂದ ಕೋಟ್ಯಂತರ ಅಭಿಮಾನಿಗಳ ಮನಗೆದ್ದಿದ್ದ ಹಿರಿಯ ನಟನಿಗೆ ಕಣ್ಣೀರ ವಿದಾಯ ಹೇಳಲಾಗಿದೆ. ಪುಣೆಯ ಡೊಂಜೆ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
ಹೌದು.. ಹಿಂದಿ ಹಾಗೂ ಮರಾಠಿ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದ 75 ವರ್ಷದ ಹಿರಿಯ ನಟ ನಾನಾ ಪಾಟೇಕರ್ ಗುರುವಾರ ಗೋವಾದ ತಮ್ಮ ನಿವಾಸದಲ್ಲಿ ಹೃದಯ ಸ್ತಂಭನದಿಂದ ನಿಧನರಾಗಿದ್ದರು. ಬಳಿಕ ಅವರ ಪಾರ್ಥಿವ ಶರೀರವನ್ನು ಪುಣೆಯ ಡೊಂಜೆ ಗ್ರಾಮದಲ್ಲಿರುವ ಅವರ ಫಾರ್ಮ್‌ಹೌಸ್‌ಗೆ ತರಲಾಗಿತ್ತು.
ಗುರುವಾರ ರಾತ್ರಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗಿದ್ದು, ಪುತ್ರ ಮಲ್ಹಾರ್ ಪಾಟೇಕರ್ ಅಂತಿಮ ವಿಧಿಗಳನ್ನು ನೆರವೇರಿಸಿದ್ದಾರೆ. ಕುಟುಂಬಸ್ಥರು, ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಅಂತಿಮ ದರ್ಶನ ಪಡೆದು ಅಗಲಿದ ನಟನಿಗೆ ಕಣ್ಣೀರ ನಮನ ಸಲ್ಲಿಸಿದ್ದಾರೆ.
ನಾನಾ ಪಾಟೇಕರ್ ಅವರ ನಿಧನದಿಂದ ಬಾಲಿವುಡ್ ಹಾಗೂ ಮರಾಠಿ ಚಿತ್ರರಂಗದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಹಲವು ದಶಕಗಳ ಕಾಲ ವಿಭಿನ್ನ ಪಾತ್ರಗಳಿಗೆ ಜೀವ ತುಂಬಿದ್ದ ಪಾಟೇಕರ್, ತಮ್ಮ ಅಮೋಘ ಅಭಿನಯ ಮತ್ತು ವಿಶಿಷ್ಟ ಸಂಭಾಷಣಾ ಶೈಲಿಯಿಂದ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು.

ಕೇವಲ ಚಿತ್ರರಂಗಕ್ಕೆ ಮಾತ್ರ ಸೀಮಿತವಾಗದೆ ರಂಗಭೂಮಿ ಹಾಗೂ ಸಮಾಜಸೇವೆಯಲ್ಲೂ ಗುರುತಿಸಿಕೊಂಡಿದ್ದರು. ವಿಶೇಷವಾಗಿ ನಾಮ್ ಫೌಂಡೇಶನ್ ಮೂಲಕ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗುವ ಕೆಲಸದಲ್ಲೂ ತೊಡಗಿಸಿಕೊಂಡಿದ್ದರು.
ಒಟ್ಟಿನಲ್ಲಿ ಭಾರತೀಯ ಚಿತ್ರರಂಗದ ಅಪರೂಪದ ಕಲಾವಿದನ ಬದುಕಿನ ಪಯಣ ಅಂತ್ಯಗೊಂಡಿದೆ. ನಾನಾ ಪಾಟೇಕರ್ ಇಂದು ನಮ್ಮೊಂದಿಗಿಲ್ಲದಿದ್ದರೂ, ಅವರ ಅಭಿನಯ, ಪಾತ್ರಗಳು ಮತ್ತು ಮರೆಯಲಾಗದ ಸಂಭಾಷಣೆಗಳು ಅಭಿಮಾನಿಗಳ ಮನಸ್ಸಿನಲ್ಲಿ ಸದಾ ಜೀವಂತವಾಗಿರಲಿವೆ.