ಅಕ್ಷರ ಗಾತ್ರ

ಮಂಗಳೂರಿನಲ್ಲಿ ಬಾಲಕರಿಗೆ ಲೈಂಗಿ*ಕ ಕಿರುಕುಳ ಆರೋಪ; ತಲೆಮರೆಸಿಕೊಂಡಿದ್ದ ಚರ್ಚ್ ಪಾದ್ರಿ ಅರೆಸ್ಟ್!

ಮಂಗಳೂರಿನಲ್ಲಿ ಬಾಲಕರಿಗೆ ಲೈಂಗಿ*ಕ ಕಿರುಕುಳ ಆರೋಪ; ತಲೆಮರೆಸಿಕೊಂಡಿದ್ದ ಚರ್ಚ್ ಪಾದ್ರಿ ಅರೆಸ್ಟ್!

ಮಂಗಳೂರು: ಹಲವು ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ವೆಲೆನ್ಸಿಯಾ ಚರ್ಚ್‌ನ ಪಾದ್ರಿ ಸಿಪ್ರಿಯನ್ ಪಿಂಟೋ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾರ್ಥನೆಗೆ ಬಂದಿದ್ದ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇಬ್ಬರು ಬಾಲಕರು ತಮಗಾದ ಅನುಭವದ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದರು ಎನ್ನಲಾಗಿದೆ. ಬಳಿಕ ಪೋಷಕರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಾರ್ಥನೆಗೆ ಬಂದಿದ್ದ ಬಾಲಕನಿಗೆ ‘ಸ್ವೀಟ್ ಬಾಯ್, ಐ ಲವ್ ಯು’ ಎಂದು ಹೇಳಿ ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪಾದ್ರಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಹೀಗಾಗಿ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದರು.

ಈ ನಡುವೆ, ಆರೋಪಿ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿರುವ ಸಂಬಂಧಿಯ ಮನೆಯಲ್ಲಿ ಅಡಗಿಕೊಂಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಸಿಪ್ರಿಯನ್ ಪಿಂಟೋ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದು, ಆರೋಪಗಳ ಕುರಿತು ಮುಂದಿನ ತನಿಖೆಯಿಂದ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

 

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಅಪರಾಧ ಮತ್ತು ಕಾನೂನು ವರದಿಗಾರರು (Crime & Legal Reporter)

NTV ಕನ್ನಡ ಸಂಪಾದಕೀಯ ತಂಡ.