ಅಕ್ಷರ ಗಾತ್ರ

ಪಿಜಿಗೆ ನುಗ್ಗಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿಗೆ ಖಾಕಿ ಗುಂಡೇಟು!

ಪಿಜಿಗೆ ನುಗ್ಗಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿಗೆ ಖಾಕಿ ಗುಂಡೇಟು!

ಚಿಕ್ಕಬಳ್ಳಾಪುರ: ಹೆಣ್ಣುಮಕ್ಕಳ ಪಿಜಿಗಳೇ ಈತನ ಟಾರ್ಗೆಟ್! ರಾತ್ರಿ ವೇಳೆ ಪಿಜಿಗಳಿಗೆ ನುಗ್ಗಿ ಯುವತಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸುತ್ತಿದ್ದಲ್ಲದೆ, ಮೊಬೈಲ್‌ಗಳನ್ನು ಕದ್ದು ಪರಾರಿಯಾಗುತ್ತಿದ್ದ ಆರೋಪಿಗೆ ಇದೀಗ ಪೊಲೀಸರ ಗುಂಡೇಟು ಬಿದ್ದಿದೆ.

ಆಂಧ್ರಪ್ರದೇಶದ ಮದನಪಲ್ಲಿ ಮೂಲದ ನರೇಶ್ ಪೊಲೀಸರ ಗುಂಡೇಟಿಗೆ ಗಾಯಗೊಂಡಿರುವ ಆರೋಪಿ. ಬೆಂಗಳೂರಿನ ಯಲಹಂಕ ಹಾಗೂ ಹುಣಸಮಾರನಹಳ್ಳಿ ಭಾಗದ ಪಿಜಿಗಳಲ್ಲಿ ಯುವತಿಯರನ್ನು ಗುರಿಯಾಗಿಸಿಕೊಂಡು ಕೃತ್ಯ ಎಸಗುತ್ತಿದ್ದ ಎಂಬ ಆರೋಪ ಈತನ ಮೇಲಿದೆ.

ಹುಣಸಮಾರನಹಳ್ಳಿ ಬಳಿಯ ಪಿಜಿಯೊಂದಕ್ಕೆ ನುಗ್ಗಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಪ್ರಕರಣದ ಬೆನ್ನಲ್ಲೇ ಪೊಲೀಸರು ಆರೋಪಿಯ ಬಂಧನಕ್ಕೆ ಮುಂದಾಗಿದ್ದರು.

ಆದರೆ, ಬಂಧಿಸಲು ತೆರಳಿದ್ದ ಲಕ್ಷ್ಮಣ್ ಹಾಗೂ ಸಚಿನ್ ಎಂಬ ಇಬ್ಬರು ಪೊಲೀಸ್ ಪೇದೆಗಳ ಮೇಲೆಯೇ ಆರೋಪಿ ಚಾಕುವಿನಿಂದ ದಾಳಿ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಚಿಕ್ಕಜಾಲ ಸಿಪಿಐ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

ಸದ್ಯ ಗಾಯಗೊಂಡಿರುವ ನರೇಶ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವನಹಳ್ಳಿ ಸಮೀಪದ ಐವಿಸಿ ರಸ್ತೆ ಲೇಔಟ್‌ನಲ್ಲಿ ಈ ಗುಂಡಿನ ದಾಳಿ ನಡೆದಿದೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಸಂಪಾದಕರು (Editor)

ಕರ್ನಾಟಕದ ರಾಜಕೀಯ, ಆಡಳಿತ, ವಿಧಾನಸೌಧ ಹಾಗೂ ಚುನಾವಣಾ ವಿದ್ಯಮಾನಗಳನ್ನು 10+ ವರ್ಷಗಳಿಂದ ವರದಿ ಮಾಡುತ್ತಿರುವ ಹಿರಿಯ ಪತ್ರಕರ್ತರು. Senior Political Correspondent covering Karnataka state politics, governance, and policy with over a decade of journalistic experience.