ಬೆಂಗಳೂರು: ರೈಲು ಹಳಿ ನವೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರು-ಅನಂತಪುರ ನಡುವಿನ ಮೆಮು ರೈಲುಗಳ ಸಂಚಾರದಲ್ಲಿ ಮಂಗಳವಾರ (ನ.3) ಬದಲಾವಣೆ ಮಾಡಲಾಗಿದೆ.
ಇದರ ಜೊತೆಗೆ, ಎಸ್‌ಎಂವಿಟಿ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಸಂಚಾರವನ್ನೂ ರದ್ದುಗೊಳಿಸಲಾಗಿದೆ. ಮತ್ತೊಂದೆಡೆ, ದೀಪಾವಳಿ ಹಬ್ಬದ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಕಂಟೋನ್ಮೆಂಟ್‌ನಿಂದ ಕೇರಳದ ತಿರುವನಂತಪುರಂ ನಾರ್ತ್‌ಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರು-ಅನಂತಪುರ ಮೆಮು ರೈಲು ಸಂಚಾರದಲ್ಲಿ ಬದಲಾವಣೆ
ಪೆನುಕೊಂಡ ಮತ್ತು ರಂಗೇಪಲ್ಲಿ ನಡುವಿನ ರೈಲು ಹಳಿ ನವೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ರೈಲು ಸಂಖ್ಯೆ 66559 ಕೆಎಸ್‌ಆರ್ ಬೆಂಗಳೂರು-ಅನಂತಪುರ ಮೆಮು ರೈಲನ್ನು ಹಿಂದೂಪುರದಿಂದ ಅನಂತಪುರದವರೆಗಿನ ಮಾರ್ಗದಲ್ಲಿ ರದ್ದುಗೊಳಿಸಲಾಗಿದೆ.

ಅದೇ ರೀತಿ, ರೈಲು ಸಂಖ್ಯೆ 66560 ಅನಂತಪುರ-ಕೆಎಸ್‌ಆರ್ ಬೆಂಗಳೂರು ಮೆಮು ರೈಲಿನ ಸಂಚಾರವನ್ನು ಅನಂತಪುರದಿಂದ ಹಿಂದೂಪುರದವರೆಗೆ ರದ್ದುಗೊಳಿಸಲಾಗಿದೆ. ಇದರೊಂದಿಗೆ, ರೈಲು ಸಂಖ್ಯೆ 12864 ಎಸ್‌ಎಂವಿಟಿ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಸಂಚಾರವನ್ನೂ ನವೆಂಬರ್ 3ರಂದು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.
ದೀಪಾವಳಿಗೆ ಬೆಂಗಳೂರಿನಿಂದ ಕೇರಳಕ್ಕೆ ವಿಶೇಷ ರೈಲು
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ಬೆಂಗಳೂರು ಕಂಟೋನ್ಮೆಂಟ್ ಮತ್ತು ತಿರುವನಂತಪುರಂ ನಾರ್ತ್ ನಡುವೆ ವಿಶೇಷ ರೈಲು ಸಂಚರಿಸಲಿದೆ.
ರೈಲು ಸಂಖ್ಯೆ 06575 ಶುಕ್ರವಾರ ಸಂಜೆ 4.40ಕ್ಕೆ ಬೆಂಗಳೂರು ಕಂಟೋನ್ಮೆಂಟ್‌ನಿಂದ ಹೊರಟು, ಮರುದಿನ ಬೆಳಗ್ಗೆ 10.30ಕ್ಕೆ ತಿರುವನಂತಪುರಂ ನಾರ್ತ್ ತಲುಪಲಿದೆ.
ಹಿಂತಿರುಗುವ ರೈಲು ಸಂಖ್ಯೆ 06576 ಶನಿವಾರ ಮಧ್ಯಾಹ್ನ 12.40ಕ್ಕೆ ತಿರುವನಂತಪುರಂ ನಾರ್ತ್‌ನಿಂದ ಹೊರಟು, ಭಾನುವಾರ ಬೆಳಗ್ಗೆ 6 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.
ಪ್ರಯಾಣಿಕರಿಗೆ ಸೂಚನೆ
ರೈಲು ಸಂಚಾರದಲ್ಲಿ ಬದಲಾವಣೆ ಹಾಗೂ ರದ್ದತಿ ಇರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ಪ್ರಯಾಣ ಆರಂಭಿಸುವ ಮೊದಲು ರೈಲಿನ ವೇಳಾಪಟ್ಟಿ ಮತ್ತು ಸಂಚಾರದ ಸ್ಥಿತಿಯನ್ನು ಪರಿಶೀಲಿಸಿಕೊಳ್ಳುವಂತೆ ರೈಲ್ವೆ ಇಲಾಖೆ ಸೂಚಿಸಿದೆ.