ಉದ್ಯೋಗದ ನಿರೀಕ್ಷೆಯಲ್ಲಿರುವ ಎಂಜಿನಿಯರಿಂಗ್ ಪದವೀಧರರಿಗೆ ಮಹತ್ವದ ಸುದ್ದಿ. ಕೇಂದ್ರ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ನವರತ್ನ ಸಾರ್ವಜನಿಕ ವಲಯದ ಉದ್ದಿಮೆಯಾದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಬೆಂಗಳೂರಿನ ಜಾಲಹಳ್ಳಿ ಘಟಕದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಗುತ್ತಿಗೆ ಆಧಾರದ ಮೇಲೆ ಒಟ್ಟು 14 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ
BEL ಸಂಸ್ಥೆಯ ಎಲೆಕ್ಟ್ರಾನಿಕ್ ವಾರ್‌ಫೇರ್ ಮತ್ತು ಏವಿಯಾನಿಕ್ಸ್ ವಿಭಾಗದಲ್ಲಿ ಈ ನೇಮಕಾತಿ ನಡೆಯಲಿದೆ. ಒಟ್ಟು 14 ಹುದ್ದೆಗಳಲ್ಲಿ ಎಲೆಕ್ಟ್ರಾನಿಕ್ಸ್ ವಿಭಾಗಕ್ಕೆ 8 ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗಕ್ಕೆ 6 ಹುದ್ದೆಗಳನ್ನು ಮೀಸಲಿಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನ ಜಾಲಹಳ್ಳಿಯಲ್ಲಿ ಕಾರ್ಯನಿರ್ವಹಿಸಬೇಕು.
ವರ್ಗವಾರು ಹುದ್ದೆಗಳ ವಿವರ ಹೀಗಿದೆ:

-
ಸಾಮಾನ್ಯ ವರ್ಗ (UR): 6 ಹುದ್ದೆಗಳು
-
ಇತರೆ ಹಿಂದುಳಿದ ವರ್ಗ (OBC): 4 ಹುದ್ದೆಗಳು
-
ಪರಿಶಿಷ್ಟ ಜಾತಿ (SC): 2 ಹುದ್ದೆಗಳು
-
ಪರಿಶಿಷ್ಟ ಪಂಗಡ (ST): 1 ಹುದ್ದೆ
-
ಆರ್ಥಿಕವಾಗಿ ದುರ್ಬಲ ವರ್ಗ (EWS): 1 ಹುದ್ದೆ
ಶೈಕ್ಷಣಿಕ ಅರ್ಹತೆ ಮತ್ತು ಅನುಭವ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ ವಿಭಾಗದಲ್ಲಿ ನಾಲ್ಕು ವರ್ಷಗಳ ಪೂರ್ಣಾವಧಿ B.E., B.Tech ಅಥವಾ B.Sc. ಎಂಜಿನಿಯರಿಂಗ್ ಪದವಿ ಪಡೆದಿರಬೇಕು.
ಇದರ ಜೊತೆಗೆ, ಎಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿದ ನಂತರ ಸಂಬಂಧಿತ ಕೈಗಾರಿಕಾ ಕ್ಷೇತ್ರದಲ್ಲಿ ಕನಿಷ್ಠ ಎರಡು ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.
ವಯೋಮಿತಿ ಮತ್ತು ವಯೋಸಡಿಲಿಕೆ
2026ರ ಅಕ್ಟೋಬರ್ 1ರಂತೆ ಅಭ್ಯರ್ಥಿಗಳ ಗರಿಷ್ಠ ವಯಸ್ಸು 32 ವರ್ಷ ಮೀರಿರಬಾರದು. ನಿಯಮಾನುಸಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
-
OBC ಅಭ್ಯರ್ಥಿಗಳಿಗೆ: 3 ವರ್ಷ
-
SC/ST ಅಭ್ಯರ್ಥಿಗಳಿಗೆ: 5 ವರ್ಷ
-
PwBD ಅಭ್ಯರ್ಥಿಗಳಿಗೆ: 10 ವರ್ಷ
ವೇತನ ಎಷ್ಟು?
ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭದಲ್ಲಿ ಮೂರು ವರ್ಷಗಳ ಗುತ್ತಿಗೆ ಅವಧಿ ಇರಲಿದೆ. ಯೋಜನೆಯ ಅಗತ್ಯ ಮತ್ತು ಅಭ್ಯರ್ಥಿಯ ಕಾರ್ಯಕ್ಷಮತೆಯನ್ನು ಆಧರಿಸಿ ಗುತ್ತಿಗೆಯನ್ನು ಗರಿಷ್ಠ ನಾಲ್ಕು ವರ್ಷಗಳವರೆಗೆ ವಿಸ್ತರಿಸುವ ಅವಕಾಶವಿದೆ.
ವೇತನದ ವಿವರ ಹೀಗಿದೆ:
-
ಮೊದಲ ವರ್ಷ: ತಿಂಗಳಿಗೆ ₹50,000
-
ನಂತರದ ಪ್ರತಿ ವರ್ಷ: ತಿಂಗಳಿಗೆ ₹5,000 ಹೆಚ್ಚಳ
-
ವಾರ್ಷಿಕ ಹೆಚ್ಚುವರಿ ಭತ್ಯೆ: ₹12,000
ನಾಲ್ಕು ವರ್ಷಗಳ ಸಂಪೂರ್ಣ ಗುತ್ತಿಗೆ ಅವಧಿಯನ್ನು ಪೂರೈಸುವ ಅಭ್ಯರ್ಥಿಗಳಿಗೆ ವರ್ಷಕ್ಕೆ ₹25,000ರಂತೆ ಒಟ್ಟು ₹1 ಲಕ್ಷ ರಿಟೆನ್ಷನ್ ಬೋನಸ್ ದೊರೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗ್ರಾಚ್ಯುಟಿಯೂ ಅನ್ವಯಿಸುವ ನಿಯಮಗಳ ಪ್ರಕಾರ ಲಭ್ಯವಾಗಲಿದೆ.
ಅರ್ಜಿ ಶುಲ್ಕದ ವಿವರ
ಸಾಮಾನ್ಯ, OBC ಮತ್ತು EWS ವರ್ಗದ ಅಭ್ಯರ್ಥಿಗಳು ₹400 ಅರ್ಜಿ ಶುಲ್ಕದ ಜೊತೆಗೆ ಶೇ.18ರಷ್ಟು GST ಪಾವತಿಸಬೇಕು. ಇದರಿಂದ ಒಟ್ಟು ಶುಲ್ಕ ₹472 ಆಗಲಿದೆ.
SC, ST ಮತ್ತು ಅಂಗವಿಕಲ (PwBD) ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗೆ?
ಅಭ್ಯರ್ಥಿಗಳ ಆಯ್ಕೆಯನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಡೆಸಲಾಗುತ್ತದೆ. ಅರ್ಹ ಅಭ್ಯರ್ಥಿಗಳು BEL ಸಂಸ್ಥೆಯ ಅಧಿಕೃತ ನೇಮಕಾತಿ ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು
-
ಅರ್ಜಿ ಆರಂಭದ ದಿನಾಂಕ: ಅಕ್ಟೋಬರ್ 9, 2026
-
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 23, 2026
ಅರ್ಜಿ ಸಲ್ಲಿಸಲು ಇನ್ನೂ ಸಮಯವಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕಕ್ಕೂ ಮುನ್ನ ಅಧಿಕೃತ ಅಧಿಸೂಚನೆಯಲ್ಲಿ ಅರ್ಹತೆ, ದಾಖಲೆಗಳು ಮತ್ತು ಅರ್ಜಿ ಸಲ್ಲಿಸುವ ವಿಧಾನವನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಬಹುದು.