ಅಕ್ಷರ ಗಾತ್ರ

ಸಚಿವರ ಮುಂದೆಯೇ ಬಿಜೆಪಿ–ಕಾಂಗ್ರೆಸ್ ಫೈಟ್! ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಜಗಳ

Bengaluru ನಲ್ಲಿ ಪೊಲೀಸ್ ಸಮ್ಮುಖದಲ್ಲಿ ಬಿಜೆಪಿ–ಕಾಂಗ್ರೆಸ್ ಮುಖಂಡರ ನಡುವೆ ವಾಗ್ವಾದ ನಡೆಯುತ್ತಿರುವುದು.

ಬೆಂಗಳೂರು: ನಗರದ ವೈಟ್‌ಫೀಲ್ಡ್ ಸಮೀಪದ ಟಿನ್ ಫ್ಯಾಕ್ಟರಿ ಬಳಿ ನಡೆದ ವಾರ್ಡ್ ಒನ್ ಕಾರ್ಯಕ್ರಮದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಮಾತಿನ ಚಕಮಕಿ ನಡೆದಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ಸಮ್ಮುಖದಲ್ಲೇ ಉಭಯ ಪಕ್ಷಗಳ ಕಾರ್ಯಕರ್ತರು ಪರಸ್ಪರ ವಾಗ್ವಾದ ನಡೆಸಿದ್ದು, ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬುದು ಕಾಂಗ್ರೆಸ್ ಕಾರ್ಯಕರ್ತರ ಪ್ರಮುಖ ಆಕ್ರೋಶವಾಗಿತ್ತು. ಬಿಜೆಪಿ ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಗಮನ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

ಈ ವಿಚಾರವಾಗಿ ಆರಂಭವಾದ ವಾಗ್ವಾದ ಬಳಿಕ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ತೀವ್ರ ಮಾತಿನ ಚಕಮಕಿಗೆ ಕಾರಣವಾಗಿದೆ. ಸಚಿವರು ಸ್ಥಳದಲ್ಲೇ ಇದ್ದರೂ ಕಾರ್ಯಕರ್ತರು ಹಾಗೂ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಪರಿಸ್ಥಿತಿ ಕೈ ಕೈ ಮಿಲಾಯಿಸುವ ಹಂತಕ್ಕೂ ತಲುಪಿದೆ ಎಂದು ತಿಳಿದುಬಂದಿದೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಮೆಟ್ರೋ ಮತ್ತು ನಗರ ವರದಿಗಾರರು (City & Metro Reporter)

NTV ಕನ್ನಡ ಸಂಪಾದಕೀಯ ತಂಡ.