ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಅವರ ಕುಟುಂಬದಲ್ಲಿ ಸಂತಸ ಮನೆಮಾಡಿದೆ.
ಶಾಸಕ ಪ್ರದೀಪ್ ಈಶ್ವರ್ ಹಾಗೂ ಪತ್ನಿ ನಯನ ದಂಪತಿಗೆ ಹೆಣ್ಣು ಮಗು ಜನಿಸಿದ್ದು, ಕುಟುಂಬಕ್ಕೆ ಪುಟ್ಟ ಮಹಾಲಕ್ಷ್ಮಿಯ ಆಗಮನವಾಗಿದೆ.
ತಂದೆಯಾಗಿರುವ ಖುಷಿಯ ವಿಚಾರವನ್ನು ಪ್ರದೀಪ್ ಈಶ್ವರ್ ಅವರು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ನವಜಾತ ಹೆಣ್ಣು ಮಗುವನ್ನು ಕೈಯಲ್ಲಿ ಎತ್ತಿಕೊಂಡು ಮುದ್ದಾಡುತ್ತಿರುವ ಫೋಟೋವನ್ನು ಪೋಸ್ಟ್ ಮಾಡಿರುವ ಅವರು, ತಮ್ಮ ಜೀವನದ ವಿಶೇಷ ಕ್ಷಣವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಇನ್ನು ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಶಾಸಕರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಪ್ರದೀಪ್ ಈಶ್ವರ್ ತಂದೆಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಹಿತೈಷಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ. ದಂಪತಿಯ ಕುಟುಂಬಕ್ಕೆ ಹೊಸ ಸದಸ್ಯೆಯ ಆಗಮನವಾಗಿರುವ ಹಿನ್ನೆಲೆಯಲ್ಲಿ ಎಲ್ಲೆಡೆಯಿಂದ ಅಭಿನಂದನೆಗಳು ವ್ಯಕ್ತವಾಗುತ್ತಿವೆ.