ಅಕ್ಷರ ಗಾತ್ರ

ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಹುಂಡಿ ಎಣಿಕೆ ಮುಕ್ತಾಯ: ಒಟ್ಟು ಕಾಣಿಕೆ ಎಷ್ಟು ಕೋಟಿ ಗೊತ್ತಾ?

ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದಲ್ಲಿ ಹುಂಡಿ ಹಣ ಎಣಿಸುತ್ತಿರುವ ಸಿಬ್ಬಂದಿ ಮತ್ತು ಕರಸೇವಕರು.

ರಾಯಚೂರು: ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ ಭಕ್ತರಿಂದ ಕಾಣಿಕೆಗಳ ಮಹಾಪೂರವೇ ಹರಿದುಬಂದಿದೆ.

ಅಕ್ಟೋಬರ್ ಮತ್ತು ನವೆಂಬರ್ ತಿಂಗಳ 19 ದಿನಗಳ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಈ ಅವಧಿಯಲ್ಲಿ ಬರೋಬ್ಬರಿ ₹2.79 ಕೋಟಿ ಕಾಣಿಕೆ ಸಂಗ್ರಹವಾಗಿದೆ.

ರಾಯರ ಸನ್ನಿಧಿಗೆ ಭಕ್ತರು ಸಲ್ಲಿಸಿರುವ ಕಾಣಿಕೆಗಳ ವಿವರ ಗಮನ ಸೆಳೆಯುತ್ತಿದೆ. ಹುಂಡಿಯಲ್ಲಿ ₹2,68,66,655 ಮೌಲ್ಯದ ನೋಟುಗಳು ಹಾಗೂ ₹7,96,300 ಮೌಲ್ಯದ ನಾಣ್ಯಗಳು ಪತ್ತೆಯಾಗಿವೆ. ಇಷ್ಟೇ ಅಲ್ಲದೆ, 49 ಗ್ರಾಂ ಚಿನ್ನ ಮತ್ತು 680 ಗ್ರಾಂ ಬೆಳ್ಳಿಯನ್ನೂ ಭಕ್ತರು ಸಮರ್ಪಿಸಿದ್ದಾರೆ.

ಪ್ರತಿ ತಿಂಗಳಿನಂತೆ ಈ ಬಾರಿಯೂ ಮಂತ್ರಾಲಯಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಕಾಣಿಕೆ ಸಂಗ್ರಹದಲ್ಲೂ ಭಾರೀ ಮೊತ್ತ ದಾಖಲಾಗಿದೆ.

ಮಠದ ಆವರಣದಲ್ಲಿ ಬಿಗಿ ಭದ್ರತೆಯ ನಡುವೆ ಹುಂಡಿ ಎಣಿಕೆ ನಡೆಸಲಾಯಿತು. ಈ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ ಸದಸ್ಯರು ಮತ್ತು ಕರಸೇವಕರು ಭಾಗವಹಿಸಿದ್ದರು. ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ಶ್ರೀಮಠದ ಅಧಿಕಾರಿಗಳ ಸಮ್ಮುಖದಲ್ಲಿ ಎಣಿಕೆ ಕಾರ್ಯ ಪೂರ್ಣಗೊಂಡಿದೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಸಂಪಾದಕರು (Editor)

ಕರ್ನಾಟಕದ ರಾಜಕೀಯ, ಆಡಳಿತ, ವಿಧಾನಸೌಧ ಹಾಗೂ ಚುನಾವಣಾ ವಿದ್ಯಮಾನಗಳನ್ನು 10+ ವರ್ಷಗಳಿಂದ ವರದಿ ಮಾಡುತ್ತಿರುವ ಹಿರಿಯ ಪತ್ರಕರ್ತರು. Senior Political Correspondent covering Karnataka state politics, governance, and policy with over a decade of journalistic experience.