ಅಕ್ಷರ ಗಾತ್ರ

ಇಬ್ಬರು ಹೆಣ್ಣು ಮಕ್ಕಳನ್ನು ಬಿಟ್ಟು ಇಹಲೋಕ ತ್ಯಜಿಸಿದ ದಂಪತಿ; ಸಾವಿನ ಹಿಂದಿನ ಕಾರಣವೇನು?

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಮೃತಪಟ್ಟ ಅಪ್ಪಾಶಿ ಮತ್ತು ರಾಜೇಶ್ವರಿ ನಡುವಿನಮನಿ ದಂಪತಿಯ ಚಿತ್ರ

ಬಾಗಲಕೋಟೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ಮತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದಲ್ಲಿ ನಡೆದಿದೆ.

ಅಪ್ಪಾಶಿ ಶಿವಪ್ಪ ನಡುವಿನಮನಿ (35) ಹಾಗೂ ಅವರ ಪತ್ನಿ ರಾಜೇಶ್ವರಿ ನಡುವಿನಮನಿ (30) ಮೃತಪಟ್ಟವರು.

ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ನಡೆದಿದ್ದೇನು?

ಮಾಹಿತಿಯ ಪ್ರಕಾರ, ಗುರುವಾರ ಬೆಳಗಿನ ಜಾವ ಸುಮಾರು 3ರಿಂದ 3.30ರ ನಡುವೆ ಮೊದಲು ಅಪ್ಪಾಶಿ ಅವರು ಮನೆಯ ಹೊರಭಾಗದಲ್ಲಿರುವ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಸಾವಿನ ವಿಚಾರ ತಿಳಿದ ಪತ್ನಿ ರಾಜೇಶ್ವರಿ ಕೂಡ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಬಗ್ಗೆ ಎಸ್‌ಪಿ ಹೇಳಿದ್ದೇನು?

ಈ ಕುರಿತು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಮಾಹಿತಿ ನೀಡಿದ್ದು, ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯ ಕುಳಲಿ ಗ್ರಾಮದ ತೋಟದ ಮನೆಯಲ್ಲಿ ಪತಿ-ಪತ್ನಿ ಇಬ್ಬರೂ ಮೃತಪಟ್ಟಿದ್ದಾರೆ. ಬೆಳಗಿನ ಜಾವ 3ರಿಂದ 3.30ರ ನಡುವೆ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

ಪತ್ನಿಯ ಮನೆಯವರ ಕಡೆಯಿಂದ ದೂರು ಸ್ವೀಕರಿಸಿ ಮುಧೋಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ದಂಪತಿಯ ಸಾವಿಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ ಎಂದು ಎಸ್‌ಪಿ ಹೇಳಿದ್ದಾರೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಸಂಪಾದಕರು (Editor)

ಕರ್ನಾಟಕದ ರಾಜಕೀಯ, ಆಡಳಿತ, ವಿಧಾನಸೌಧ ಹಾಗೂ ಚುನಾವಣಾ ವಿದ್ಯಮಾನಗಳನ್ನು 10+ ವರ್ಷಗಳಿಂದ ವರದಿ ಮಾಡುತ್ತಿರುವ ಹಿರಿಯ ಪತ್ರಕರ್ತರು. Senior Political Correspondent covering Karnataka state politics, governance, and policy with over a decade of journalistic experience.