ಅಕ್ಷರ ಗಾತ್ರ

ಅಮಾವಾಸ್ಯೆ ಹಿನ್ನೆಲೆ ಮಾದಪ್ಪನ ಸನ್ನಿಧಿಯಲ್ಲಿ ಜನವೋ ಜನ; ವಿಶೇಷ ಸೇವೆ ಸಲ್ಲಿಸಿದ ಭಕ್ತರು

ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಮಾವಾಸ್ಯೆ ಹಿನ್ನೆಲೆ ಮಾದಪ್ಪನ ಸನ್ನಿಧಿಗೆ ನೆರೆದಿರುವ ಅಪಾರ ಭಕ್ತರು.

ಚಾಮರಾಜನಗರ: ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಾತ್ರೆಯ ಕಳೆ ಮತ್ತಷ್ಟು ಹೆಚ್ಚಾಗಿದೆ.

ದೀಪಾವಳಿ ಅಮಾವಾಸ್ಯೆ ಹಿನ್ನೆಲೆ ಮಾದಪ್ಪನ ದರ್ಶನಕ್ಕಾಗಿ ಭಕ್ತರು ತಂಡೋಪತಂಡವಾಗಿ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ.

ಮಾದಪ್ಪನ ಸನ್ನಿಧಿಯಲ್ಲಿ ಎಲ್ಲೆಡೆ ಉಘೇ ಉಘೇ ಎಂಬ ಭಕ್ತಿಯ ಉದ್ಘೋಷ ಕೇಳಿಬರುತ್ತಿದೆ. ದೇವರ ದರ್ಶನಕ್ಕಾಗಿ ಭಕ್ತರು ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ಕಾಯುತ್ತಿದ್ದು, ಭಕ್ತಿಯಿಂದ ಸ್ವಾಮಿಯ ದರ್ಶನ ಪಡೆಯುತ್ತಿದ್ದಾರೆ.

ಇನ್ನೊಂದೆಡೆ, ಹುಲಿವಾಹನ, ಬಸವ ವಾಹನ ಹಾಗೂ ರುದ್ರಾಕ್ಷ ಸೇರಿದಂತೆ ಹಲವು ಧಾರ್ಮಿಕ ಸೇವೆಗಳು ನೆರವೇರುತ್ತಿವೆ. ದೀಪಾವಳಿ ಅಮಾವಾಸ್ಯೆಯ ವಿಶೇಷ ದಿನದಂದು ಮಾದಪ್ಪನ ದರ್ಶನ ಪಡೆದು ಭಕ್ತರು ಪುನೀತರಾಗುತ್ತಿದ್ದಾರೆ. ಇನ್ನೂ ಎರಡು ದಿನಗಳ ಕಾಲ ಜಾತ್ರೆ ಮುಂದುವರಿಯಲಿದ್ದು, ವಿವಿಧ ಜಿಲ್ಲೆಗಳಿಂದ ಭಕ್ತರ ಆಗಮನವೂ ಮುಂದುವರಿದಿದೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಸಂಪಾದಕರು (Editor)

ಕರ್ನಾಟಕದ ರಾಜಕೀಯ, ಆಡಳಿತ, ವಿಧಾನಸೌಧ ಹಾಗೂ ಚುನಾವಣಾ ವಿದ್ಯಮಾನಗಳನ್ನು 10+ ವರ್ಷಗಳಿಂದ ವರದಿ ಮಾಡುತ್ತಿರುವ ಹಿರಿಯ ಪತ್ರಕರ್ತರು. Senior Political Correspondent covering Karnataka state politics, governance, and policy with over a decade of journalistic experience.