ಅಕ್ಷರ ಗಾತ್ರ

ಅರವಿಂದ್ ಕೇಜ್ರಿವಾಲ್ʼಗೆ ಜೀವ ಬೆದರಿಕೆ; 7 ಕೋಟಿ ರೂ.ಗೆ ಬೇಡಿಕೆ, ಮಗಳು ಸೇರಿ ಕೊ*ಲೆ ಮಾಡುವುದಾಗಿ ಬೆದರಿಕೆ!

ತಮ್ಮ ಕನ್ನಡಕವನ್ನು ಸರಿಪಡಿಸಿಕೊಳ್ಳುತ್ತಿರುವ ಅರವಿಂದ್ ಕೇಜ್ರಿವಾಲ್

ನವದೆಹಲಿ: ಆಮ್ ಆದ್ಮಿ ಪಾರ್ಟಿ (ಎಎಪಿ) ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೀವ ಬೆದರಿಕೆ ಬಂದಿರುವುದಾಗಿ ವರದಿಯಾಗಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯನೆಂದು ಹೇಳಿಕೊಂಡ ವ್ಯಕ್ತಿಯೊಬ್ಬ 7 ಕೋಟಿ ರೂ. ಹಣ ನೀಡುವಂತೆ ಬೇಡಿಕೆ ಇಟ್ಟಿದ್ದು, ಹಣ ನೀಡದಿದ್ದರೆ ಕೇಜ್ರಿವಾಲ್ ಮತ್ತು ಅವರ ಮಗಳನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ವರದಿಗಳ ಪ್ರಕಾರ, ನವೆಂಬರ್ 6ರಂದು ವ್ಯಕ್ತಿಯೊಬ್ಬ ಎಎಪಿ ತಿಲಕ್ ನಗರ ಶಾಸಕ ಜರ್ನೈಲ್ ಸಿಂಗ್ ಅವರಿಗೆ ಕರೆ ಮಾಡಿದ್ದಾನೆ. ತಾನು ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಎಂದು ಪರಿಚಯಿಸಿಕೊಂಡು, 7 ಕೋಟಿ ರೂ. ನೀಡುವಂತೆ ಒತ್ತಾಯಿಸಿದ್ದಾನೆ. ಹಣ ನೀಡದಿದ್ದರೆ ಅರವಿಂದ್ ಕೇಜ್ರಿವಾಲ್ ಹಾಗೂ ಅವರ ಮಗಳನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ.

ಕರೆ ಮಾಡುವುದರ ಜೊತೆಗೆ ವಾಟ್ಸಾಪ್ ಮೂಲಕವೂ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಜರ್ನೈಲ್ ಸಿಂಗ್ ಅವರು ಮೊಹಾಲಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ.

ದೂರಿನ ಆಧಾರದ ಮೇಲೆ ಮೊಹಾಲಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ತನಿಖೆಯನ್ನು ಸೈಬರ್ ಕ್ರೈಂ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸುನಿಲ್ ಕುಮಾರ್ ಅವರಿಗೆ ವಹಿಸಲಾಗಿದೆ.

ಸದ್ಯ ಪೊಲೀಸರು ಬೆದರಿಕೆ ಕರೆ ಮತ್ತು ವಾಟ್ಸಾಪ್ ಸಂದೇಶಗಳ ಮೂಲವನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗಿನ ವ್ಯಕ್ತಿಯ ಸಂಪರ್ಕದ ಬಗ್ಗೆಯೂ ತನಿಖೆ ನಡೆಯಬೇಕಿದೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವರದಿಗಾರರು (National & International Reporter)

NTV ಕನ್ನಡ ಸಂಪಾದಕೀಯ ತಂಡ.