ಅಕ್ಷರ ಗಾತ್ರ

ಬೆಳಗಾವಿಯಲ್ಲಿ ಆಸ್ತಿ ಕಲಹಕ್ಕೆ ಡಬಲ್ ಮರ್ಡರ್; ಅತ್ತೆ-ಅಳಿಯನ ಹತ್ಯೆ ಮಾಡಿದ ಸಂಬಂಧಿಕರು!

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನಲ್ಲಿ ಜಮೀನು ಹಂಚಿಕೆ ವಿವಾದ ವಿಕೋಪಕ್ಕೆ ತಿರುಗಿ ಅತ್ತೆ-ಅಳಿಯನ ಹತ್ಯೆ ನಡೆದಿದೆ. 10 ಎಕರೆ ಆಸ್ತಿ ಕಲಹಕ್ಕೆ ಇಬ್ಬರು ಬಲಿಯಾಗಿದ್ದು, ಪೊಲೀಸರು ಸಾಕ್ಷ್ಯ ಸಂಗ್ರಹಿಸಿದ್ದಾರೆ.

Belagavi Yaragatti Jivapura property dispute investigation site by Murgod Police
ಬೆಳಗಾವಿ ಜಿಲ್ಲೆಯ ಜೀವಾಪುರ ಗ್ರಾಮದಲ್ಲಿ ನಡೆದ ಕೃತ್ಯದ ಸ್ಥಳ ಪರಿಶೀಲನೆ ನಡೆಸಿದ ಮುರಗೋಡ ಪೊಲೀಸರು.

ಬೆಳಗಾವಿ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಅತ್ತೆ ಹಾಗೂ ಅಳಿಯನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಜೀವಾಪುರ ಗ್ರಾಮದಲ್ಲಿ ನಡೆದಿದೆ. ಬಸವ್ವ ನಾಯ್ಕರ್ (60) ಮತ್ತು ರಮೇಶ್ ನಾಯ್ಕರ್ (29) ಕೊಲೆಯಾದವರು. ಮೃತ ಬಸವ್ವ ಅವರ ಅಕ್ಕನ ಮಗ ಹಾಗೂ ತಂಗಿಯ ಮಗ ಸೇರಿಕೊಂಡು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಕುಟುಂಬದ ಸದಸ್ಯರ ನಡುವೆ 10 ಎಕರೆ ಜಮೀನು ಹಂಚಿಕೆ ವಿಚಾರವಾಗಿ ಬಹುಕಾಲದಿಂದ ವಿವಾದ ನಡೆಯುತ್ತಿತ್ತು. ಅಣ್ಣ-ತಮ್ಮಂದಿರು ಹಾಗೂ ಅಕ್ಕ-ತಂಗಿಯರ ನಡುವೆ ಜಮೀನು ಹಂಚಿಕೆಗೆ ಸಂಬಂಧಿಸಿದಂತೆ ಉಂಟಾಗಿದ್ದ ಕಲಹವೇ ಈ ಭೀಕರ ಹತ್ಯೆಗೆ ಕಾರಣ ಎನ್ನಲಾಗಿದೆ. ಆಸ್ತಿ ವಿವಾದ ವಿಕೋಪಕ್ಕೆ ತಿರುಗಿ ಇಬ್ಬರ ಜೀವ ಬಲಿಯಾಗಿದ್ದು, ಘಟನೆಯಿಂದ ಜೀವಾಪುರ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಾಮದುರ್ಗ ಡಿವೈಎಸ್ಪಿ ಸೇರಿದಂತೆ ಮುರಗೋಡ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಹಾಗೂ ವಿಧಿವಿಜ್ಞಾನ ತಂಡವೂ ಸ್ಥಳಕ್ಕೆ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಸಂಪಾದಕರು (Editor)

ಕರ್ನಾಟಕದ ರಾಜಕೀಯ, ಆಡಳಿತ, ವಿಧಾನಸೌಧ ಹಾಗೂ ಚುನಾವಣಾ ವಿದ್ಯಮಾನಗಳನ್ನು 10+ ವರ್ಷಗಳಿಂದ ವರದಿ ಮಾಡುತ್ತಿರುವ ಹಿರಿಯ ಪತ್ರಕರ್ತರು. Senior Political Correspondent covering Karnataka state politics, governance, and policy with over a decade of journalistic experience.