ಅಕ್ಷರ ಗಾತ್ರ

ದೆಹಲಿಯಿಂದ ಬೆಂಗಳೂರಿಗೆ ಡ್ರಗ್ಸ್ ಸಾಗಣೆ ಮಾಡಿ ಮಾರಾಟ: 5 ಕೆಜಿಗೂ ಅಧಿಕ MDMA ವಶ, ಇಬ್ಬರು ಅರೆಸ್ಟ್

Bengaluru ನಲ್ಲಿ ಡ್ರಗ್ಸ್ ಸಾಗಾಟ ಪ್ರಕರಣದಲ್ಲಿ ಬಂಧಿತರಾದ ಇಮ್ರಾನ್ ಸಿದ್ದಿಕ್ ಮತ್ತು ಆಯಿಷಾ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಮಾರಾಟ ಜಾಲದ ವಿರುದ್ಧ ಯಲಹಂಕ ಓಲ್ಡ್ ಟೌನ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಬರೋಬ್ಬರಿ 11 ಕೋಟಿ ರೂಪಾಯಿ ಮೌಲ್ಯದ ವಿವಿಧ ಬಗೆಯ ಡ್ರಗ್ಸ್‌ಗಳನ್ನು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಇಮ್ರಾನ್ ಸಿದ್ದಿಕ್ ಮತ್ತು ಆಯಿಷಾ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿಗಳು ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ತಂದು, ಬಳಿಕ ಯಲಹಂಕ ಉಪನಗರದ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

ಪೊಲೀಸರ ಕಾರ್ಯಾಚರಣೆ ವೇಳೆ ಆರೋಪಿಗಳಿಂದ ಐದು ಕೆಜಿಗೂ ಅಧಿಕ ತೂಕದ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಡ್ರಗ್ಸ್ ಸಾಗಣೆಗೆ ಬಳಸುತ್ತಿದ್ದ ಕಾರನ್ನೂ ಪೊಲೀಸರು ಜಪ್ತಿ ಮಾಡಿದ್ದಾರೆ.

ಈ ಸಂಬಂಧ ಯಲಹಂಕ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ಡ್ರಗ್ಸ್ ಎಲ್ಲಿಂದ ಸಂಗ್ರಹಿಸುತ್ತಿದ್ದರು, ಬೆಂಗಳೂರಿನಲ್ಲಿ ಯಾರಿಗೆ ಮಾರಾಟ ಮಾಡುತ್ತಿದ್ದರು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಮೆಟ್ರೋ ಮತ್ತು ನಗರ ವರದಿಗಾರರು (City & Metro Reporter)

NTV ಕನ್ನಡ ಸಂಪಾದಕೀಯ ತಂಡ.