ಅಕ್ಷರ ಗಾತ್ರ

ಎಂಜಿನಿಯರಿಂಗ್ ಪದವೀಧರರಿಗೆ ಗುಡ್‌ನ್ಯೂಸ್; BHELನಲ್ಲಿ 200 ಹುದ್ದೆಗಳಿಗೆ ಅರ್ಜಿ ಆಹ್ವಾನ

BHEL ನೇಮಕಾತಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೀಬೋರ್ಡ್‌ನಲ್ಲಿರುವ Apply Now ಬಟನ್.

ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನರಿಗೆ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ಸಿಹಿಸುದ್ದಿ ನೀಡಿದೆ.

ಕೇಂದ್ರ ಸರ್ಕಾರದ ಮಹಾರತ್ನ ಸಾರ್ವಜನಿಕ ವಲಯದ ಉದ್ಯಮವಾಗಿರುವ BHEL, ಒಟ್ಟು 200 ಎಂಜಿನಿಯರ್ ಟ್ರೈನಿ (Engineer Trainee) ಮತ್ತು ಎಕ್ಸಿಕ್ಯುಟಿವ್ ಟ್ರೈನಿ (Executive Trainee) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಡಿಸೆಂಬರ್ 28ರೊಳಗೆ ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಯಾವೆಲ್ಲ ವಿಭಾಗಗಳಲ್ಲಿ ಹುದ್ದೆಗಳಿವೆ?

ಈ ನೇಮಕಾತಿಯಲ್ಲಿ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಸಿವಿಲ್ ಹಾಗೂ ಮಾಹಿತಿ ತಂತ್ರಜ್ಞಾನ (IT) ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗಗಳ ಎಂಜಿನಿಯರಿಂಗ್ ಪದವೀಧರರು ಅರ್ಜಿ ಸಲ್ಲಿಸಬಹುದು.

ಇದರ ಜೊತೆಗೆ ಹಣಕಾಸು ವಿಭಾಗದ ಹುದ್ದೆಗಳಿಗೆ ಚಾರ್ಟರ್ಡ್ ಅಕೌಂಟೆಂಟ್ (CA) ಮತ್ತು ಕಾಸ್ಟ್ ಅಂಡ್ ಮ್ಯಾನೇಜ್‌ಮೆಂಟ್ ಅಕೌಂಟೆಂಟ್ (CMA) ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಲು ಅವಕಾಶವಿದೆ. ಮಾನವ ಸಂಪನ್ಮೂಲ (HR) ವಿಭಾಗದ ಹುದ್ದೆಗಳಿಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಜನವರಿ 27ರಂದು ಕಂಪ್ಯೂಟರ್ ಆಧಾರಿತ ಪರೀಕ್ಷೆ:

ನೇಮಕಾತಿ ಪ್ರಕ್ರಿಯೆಯ ಭಾಗವಾಗಿ 2027ರ ಜನವರಿ 27ರಂದು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBE) ನಡೆಸಲು BHEL ನಿರ್ಧರಿಸಿದೆ. ಪರೀಕ್ಷೆಯಲ್ಲಿ ಸಾಮಾನ್ಯ ಮತ್ತು ಆರ್ಥಿಕವಾಗಿ ದುರ್ಬಲ ವರ್ಗದ (EWS) ಅಭ್ಯರ್ಥಿಗಳು ಕನಿಷ್ಠ ಶೇ.40ರಷ್ಟು ಅಂಕಗಳನ್ನು ಗಳಿಸಬೇಕು.

ಇನ್ನು OBC-NCL, ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಅಭ್ಯರ್ಥಿಗಳಿಗೆ ಕನಿಷ್ಠ ಶೇ.30ರಷ್ಟು ಅಂಕಗಳನ್ನು ನಿಗದಿಪಡಿಸಲಾಗಿದೆ. ನಿಗದಿತ ಅರ್ಹತಾ ಅಂಕಗಳನ್ನು ಗಳಿಸಿದ ಅಭ್ಯರ್ಥಿಗಳನ್ನು ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಸಂದರ್ಶನಕ್ಕೆ ಆಯ್ಕೆ ಮಾಡಲಾಗುತ್ತದೆ. ಪ್ರತಿ ವಿಭಾಗ ಮತ್ತು ವರ್ಗದ ಖಾಲಿ ಹುದ್ದೆಗಳಿಗೆ 1:5 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವಾಗ ಈ ಅಂಶ ಗಮನಿಸಿ:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವೇಳೆ ಲಭ್ಯವಿರುವ ಹುದ್ದೆಗಳಿಗೆ ಅನುಗುಣವಾಗಿ ಉತ್ಪಾದನಾ ಘಟಕಗಳು ಮತ್ತು ವಿದ್ಯುತ್ ವಲಯದ ಕೆಲಸದ ಸ್ಥಳಗಳ ಕುರಿತು ತಮ್ಮ ಆದ್ಯತೆಗಳನ್ನು ನಮೂದಿಸಬೇಕು. ಅಭ್ಯರ್ಥಿಗಳ ಆಯ್ಕೆ, ಮೆರಿಟ್ ಪಟ್ಟಿ, ಖಾಲಿ ಹುದ್ದೆಗಳ ಲಭ್ಯತೆ ಮತ್ತು ಮೀಸಲಾತಿ ನಿಯಮಗಳನ್ನು ಆಧರಿಸಿ ಅಂತಿಮ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳಿಗೆ ಕೆಲಸದ ಸ್ಥಳವನ್ನು ನಿಗದಿಪಡಿಸುವ ಅಂತಿಮ ಅಧಿಕಾರ BHELಗೆ ಇರಲಿದೆ.

ಆಯ್ಕೆಯಾದವರಿಗೆ 10 ವರ್ಷಗಳ ಸೇವಾ ಷರತ್ತು:

ಈ ನೇಮಕಾತಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳು ಕೆಲಸಕ್ಕೆ ಸೇರಿದ ದಿನಾಂಕದಿಂದ ಕನಿಷ್ಠ 10 ವರ್ಷಗಳ ಕಾಲ ತಮಗೆ ನಿಯೋಜಿಸಲಾದ ಸ್ಥಳದಲ್ಲೇ ಸೇವೆ ಸಲ್ಲಿಸಬೇಕೆಂಬ ಷರತ್ತನ್ನು ಸಂಸ್ಥೆ ವಿಧಿಸಿದೆ. ನೇಮಕಾತಿ ವೇಳಾಪಟ್ಟಿಯಲ್ಲಿ ಅನಿವಾರ್ಯ ಕಾರಣಗಳಿಂದ ಬದಲಾವಣೆಗಳಾಗುವ ಸಾಧ್ಯತೆಯಿದ್ದು, ಅಂತಹ ಮಾಹಿತಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಅಭ್ಯರ್ಥಿಗಳು BHELನ ಅಧಿಕೃತ ವೆಬ್‌ಸೈಟ್ careers.bhel.in ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಪರಿಶೀಲಿಸಬೇಕು. ಅರ್ಹತೆ, ವಯೋಮಿತಿ, ಅರ್ಜಿ ಶುಲ್ಕ ಹಾಗೂ ಇತರ ನಿಯಮಗಳನ್ನು ಖಚಿತಪಡಿಸಿಕೊಂಡ ಬಳಿಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 28

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಎಲ್ಲ ವಿವರಗಳನ್ನು ಪರಿಶೀಲಿಸುವುದು ಅಗತ್ಯ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ವಾಣಿಜ್ಯ ಮತ್ತು ತಂತ್ರಜ್ಞಾನ ವರದಿಗಾರರು (Business & Tech Reporter)

NTV ಕನ್ನಡ ಸಂಪಾದಕೀಯ ತಂಡ.