ಅಕ್ಷರ ಗಾತ್ರ

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್‌ನ್ಯೂಸ್; ಚಿತ್ರದುರ್ಗದಲ್ಲಿ 4 ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ 4 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹಾಗೂ ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

Chitradurga DHFWS ನೇಮಕಾತಿ ಅಡಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಚಿತ್ರದುರ್ಗ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವೊಂದು ಒದಗಿಬಂದಿದೆ.

ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (DHFWS) ವತಿಯಿಂದ ಚಳ್ಳಕೆರೆ ತಾಲೂಕು ಮಾನಸಿಕ ಆರೋಗ್ಯ ಕಾರ್ಯಕ್ರಮದ (TMHP) ಅಡಿಯಲ್ಲಿ ಖಾಲಿ ಇರುವ 4 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಯಾವೆಲ್ಲ ಹುದ್ದೆಗಳು?

ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಮನೋವೈದ್ಯರು ಹಾಗೂ ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 21ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಡಿಸೆಂಬರ್ 5 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಂದು ಸಂಜೆ 4.30ರೊಳಗೆ ಅರ್ಜಿಗಳು ಕಚೇರಿಗೆ ತಲುಪಬೇಕು.

ಶೈಕ್ಷಣಿಕ ಅರ್ಹತೆ ಏನು?

ಮನೋವೈದ್ಯರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ MBBS ಪದವಿಯೊಂದಿಗೆ ಮನೋವೈದ್ಯಶಾಸ್ತ್ರದಲ್ಲಿ MD, DNB ಅಥವಾ DPM ಪದವಿ ಪಡೆದಿರಬೇಕು. ಆಸ್ಪತ್ರೆಯಲ್ಲಿ ಎರಡು ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.

ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗೆ ಸೈಕಾಲಜಿ ಅಥವಾ ಅಪ್ಲೈಡ್ ಸೈಕಾಲಜಿಯಲ್ಲಿ ಸ್ನಾತಕೋತ್ತರ ಪದವಿ (PG) ಹಾಗೂ RCI ಮಾನ್ಯತೆ ಪಡೆದ ಎರಡು ವರ್ಷಗಳ ಪೂರ್ಣಾವಧಿ M.Phil ಪದವಿ ಹೊಂದಿರಬೇಕು. M.Phil ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ, ರೆಗ್ಯುಲರ್ ಕೋರ್ಸ್ ಮೂಲಕ MA ಅಥವಾ M.Sc ಸೈಕಾಲಜಿ ಪದವಿ ಪಡೆದವರನ್ನೂ ಪರಿಗಣಿಸಲಾಗುತ್ತದೆ.

ಅಭ್ಯರ್ಥಿಗಳ ವಯೋಮಿತಿ ಮತ್ತು ಮೀಸಲಾತಿ ಸಡಿಲಿಕೆ ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯ ನಿಯಮಗಳ ಪ್ರಕಾರ ಅನ್ವಯವಾಗಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲು ರಾಜ್ಯ ಆರೋಗ್ಯ ಅಭಿಯಾನದ ಅಧಿಕೃತ ವೆಬ್‌ಸೈಟ್ nhm.karnataka.gov.in ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಪರಿಶೀಲಿಸಬೇಕು. ಬಳಿಕ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಬೇಕು.

ಅರ್ಜಿಯೊಂದಿಗೆ ವಯಸ್ಸಿನ ದೃಢೀಕರಣ ಪತ್ರ, ಶೈಕ್ಷಣಿಕ ಅಂಕಪಟ್ಟಿಗಳು, ಗುರುತಿನ ಚೀಟಿ, ಅನುಭವ ಪ್ರಮಾಣಪತ್ರ (ಅನ್ವಯಿಸಿದರೆ) ಹಾಗೂ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದ ಸ್ವಯಂ ದೃಢೀಕರಿಸಿದ ಪ್ರತಿಗಳನ್ನು ಲಗತ್ತಿಸಬೇಕು.

ಪೂರ್ಣಗೊಳಿಸಿದ ಅರ್ಜಿಯನ್ನು ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಮೂಲಕ ಅಥವಾ ಖುದ್ದಾಗಿ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬಹುದು:

ಅರ್ಜಿ ಸಲ್ಲಿಸುವ ವಿಳಾಸ:

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ (DHO Office), ಚಿತ್ರದುರ್ಗ.

ಆಯ್ಕೆ ಪ್ರಕ್ರಿಯೆ ಹೇಗೆ?

ಈ ನೇಮಕಾತಿಗೆ ಲಿಖಿತ ಪರೀಕ್ಷೆ ಇರುವುದಿಲ್ಲ. ಅಭ್ಯರ್ಥಿಗಳು ಗಳಿಸಿರುವ ಶೈಕ್ಷಣಿಕ ಅಂಕಗಳ ಮೆರಿಟ್ ಹಾಗೂ ಸರ್ಕಾರದ ರೋಸ್ಟರ್ ನಿಯಮಗಳ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಪ್ರಮುಖ ದಿನಾಂಕ:

  • ಅರ್ಜಿ ಸಲ್ಲಿಕೆ ಆರಂಭ: ನವೆಂಬರ್ 21, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 5, 2026
  • ಅರ್ಜಿ ಸಲ್ಲಿಕೆಯ ಕೊನೆಯ ಸಮಯ: ಸಂಜೆ 4.30

ಹೆಚ್ಚಿನ ಮಾಹಿತಿ ಮತ್ತು ಸಂಪೂರ್ಣ ಅಧಿಸೂಚನೆಗಾಗಿ ಅಭ್ಯರ್ಥಿಗಳು NHM ಕರ್ನಾಟಕ ಅಧಿಕೃತ ವೆಬ್‌ಸೈಟ್ ಪರಿಶೀಲಿಸಬಹುದು.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಸಂಪಾದಕರು (Editor)

ಕರ್ನಾಟಕದ ರಾಜಕೀಯ, ಆಡಳಿತ, ವಿಧಾನಸೌಧ ಹಾಗೂ ಚುನಾವಣಾ ವಿದ್ಯಮಾನಗಳನ್ನು 10+ ವರ್ಷಗಳಿಂದ ವರದಿ ಮಾಡುತ್ತಿರುವ ಹಿರಿಯ ಪತ್ರಕರ್ತರು. Senior Political Correspondent covering Karnataka state politics, governance, and policy with over a decade of journalistic experience.