ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ಕೊಡಗು, ತುಮಕೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಇನ್ನು, ಇಂದು ಮಧ್ಯಾಹ್ನದ ಬಳಿಕ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರಂ, ಬಸವೇಶ್ವರ ನಗರ, ಕುರಬರಹಳ್ಳಿ, ಓಕಳೀಪುರಂ, ವಿಧಾನಸೌಧ, ಕಾರ್ಪೊರೇಷನ್, ಶಿವಾಜಿನಗರ, ವಸಂತನಗರ, ಶೇಷಾದ್ರಿಪುರ, ಮೆಜೆಸ್ಟಿಕ್, ಹಲಸೂರು, ಎಂಜಿ ರಸ್ತೆ, ರಿಚ್ಮಂಡ್ ಟೌನ್ ಹಾಗೂ ಮಾರ್ಕೆಟ್ ಸುತ್ತಮುತ್ತ ಮಳೆ ಸುರಿದಿದೆ.
ಹಠಾತ್ ಸುರಿದ ಮಳೆಯಿಂದ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸಿದ್ದಾರೆ. ಮುಂದಿನ ಮೂರು ದಿನವೂ ಮಳೆಯಾಗುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಹವಾಮಾನ ಇಲಾಖೆಯ ಮುನ್ಸೂಚನೆ ಗಮನಿಸುವುದು ಸೂಕ್ತ.
