ಅಕ್ಷರ ಗಾತ್ರ

ನಟ ಧನ್ವೀರ್ʼಗೆ ಹೈಕೋರ್ಟ್ ವಿಚಾರಣೆ: ಮೂರು FIR ರದ್ದುಪಡಿಸುವಂತೆ ಅರ್ಜಿ ಸಲ್ಲಿಕೆ

Darshan, Dhanveerrah ಮತ್ತು Darshan ಪತ್ನಿ ವಿಜಯಲಕ್ಷ್ಮಿ ಅವರ ಕೊಲಾಜ್ ಚಿತ್ರ

ಬೆಂಗಳೂರು: ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಮೂರು ಪ್ರತ್ಯೇಕ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ನಟ ಧನ್ವೀರ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಈ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಲಿದೆ.

ವಿಜಯಲಕ್ಷ್ಮಿ ಅವರ ಮ್ಯಾನೇಜರ್‌ ನಾಗರಾಜ್‌ ನೀಡಿದ ದೂರಿನ ಮೇರೆಗೆ ಆರ್‌.ಆರ್‌. ನಗರ ಪೊಲೀಸ್‌ ಠಾಣೆಯಲ್ಲಿ ಧನ್ವೀರ್‌ ವಿರುದ್ಧ ಪ್ರಕರಣ ದಾಖಲಾಗಿತ್ತು. ಭೋಜರಾಜ್‌ ರೈ ನೀಡಿದ ದೂರಿನ ಆಧಾರದಲ್ಲಿ ಬಸವೇಶ್ವರ ನಗರ ಪೊಲೀಸ್‌ ಠಾಣೆಯಲ್ಲೂ ಎಫ್‌ಐಆರ್‌ ದಾಖಲಾಗಿತ್ತು.

ಇನ್ನು ನಟ ಝೈದ್‌ ಖಾನ್‌ ಅಭಿಮಾನಿಗಳ ಸಂಘದ ಅಧ್ಯಕ್ಷ ವಿನಾಯಕ ನೀಡಿದ ದೂರಿನ ಮೇರೆಗೆ ಚಾಮರಾಜಪೇಟೆ ಮತ್ತು ಬ್ಯಾಟರಾಯನಪುರ ಪೊಲೀಸ್‌ ಠಾಣೆಗಳಲ್ಲಿಯೂ ಪ್ರಕರಣಗಳು ದಾಖಲಾಗಿದ್ದವು.

ಈ ಎಲ್ಲಾ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ನಟ ಧನ್ವೀರ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ನಡೆಯಲಿರುವ ವಿಚಾರಣೆಯಲ್ಲಿ ನ್ಯಾಯಾಲಯ ಯಾವ ನಿಲುವು ತೆಗೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಮನರಂಜನಾ ವರದಿಗಾರರು (Entertainment & Cinema Reporter)

NTV ಕನ್ನಡ ಸಂಪಾದಕೀಯ ತಂಡ.