ಅಕ್ಷರ ಗಾತ್ರ

ಹೊಸಪೇಟೆ ಬಳಿ ಭೀಕರ ಅಪಘಾತ: ಒಂದೂವರೆ ವರ್ಷದ ಮಗು ಸೇರಿ ಮೂವರ ಸಾ*ವು

ಹೊಸಪೇಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದ ಸ್ಥಳ ಮತ್ತು ಡಿಕ್ಕಿ ಹೊಡೆದ ಕಾರು

ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ಧರ್ಮಸಾಗರ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೂವರೆ ವರ್ಷದ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.

ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಮೃತರನ್ನು ತಾಯಮ್ಮ (55), ಜ್ಯೋತಿ (28) ಮತ್ತು ಒಂದೂವರೆ ವರ್ಷದ ದಿವ್ಯ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಲಕ್ಷ್ಮಣ್ ಹಾಗೂ ಅವರ ಮತ್ತೊಬ್ಬ ಮಗಳು ಸೃಷ್ಟಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ಲಕ್ಷ್ಮಣ್ ಅವರ ಕುಟುಂಬ, ಹೊಸಪೇಟೆ ತಾಲೂಕಿನ ಕೊಟಗಿನಾಳ್ ಗ್ರಾಮಕ್ಕೆ ಶುಭಕಾರ್ಯಕ್ಕಾಗಿ ತೆರಳಿತ್ತು. ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬ ಬೈಕ್‌ನಲ್ಲಿ ಮೆಟ್ರಿ ಗ್ರಾಮಕ್ಕೆ ವಾಪಸ್ ಆಗುತ್ತಿದ್ದಾಗ ಧರ್ಮಸಾಗರ ಗ್ರಾಮದ ಬಳಿ ಹಿಂಬದಿಯಿಂದ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯ ಪಿಐ ಗುರುರಾಜ್ ಕಟ್ಟಿಮನಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ಸಂಬಂಧ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಸಂಪಾದಕರು (Editor)

ಕರ್ನಾಟಕದ ರಾಜಕೀಯ, ಆಡಳಿತ, ವಿಧಾನಸೌಧ ಹಾಗೂ ಚುನಾವಣಾ ವಿದ್ಯಮಾನಗಳನ್ನು 10+ ವರ್ಷಗಳಿಂದ ವರದಿ ಮಾಡುತ್ತಿರುವ ಹಿರಿಯ ಪತ್ರಕರ್ತರು. Senior Political Correspondent covering Karnataka state politics, governance, and policy with over a decade of journalistic experience.