ಅಕ್ಷರ ಗಾತ್ರ

ನಿರ್ಮಾಣ ಹಂತದ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ; ನಾಲ್ವರು ಯುವಕರು ಸ್ಥಳದಲ್ಲೇ ಸಾ*ವು

Yadgir ಬಳಿ ಭೀಕರ ಅಪಘಾತಕ್ಕೀಡಾದ ಕಾರಿನ ಬಳಿ ಪರಿಶೀಲನೆ ನಡೆಸುತ್ತಿರುವ ಪೊಲೀಸರು.

ಯಾದಗಿರಿ: ನಿರ್ಮಾಣ ಹಂತದ ಚೆನ್ನೈ-ಸೂರತ್ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಇಬ್ರಾಹಿಂ ಡಿಬಿಎಲ್ ಕ್ಯಾಂಪ್ ಬಳಿ ನಡೆದಿದೆ.

ಮೃತರನ್ನು ಗುರುರಾಜ್ ಚವ್ಹಾಣ್ (35), ರೆಡ್ಡಿ ರಾಠೋಡ್ (33), ಗೋವಿಂದ ಚವ್ಹಾಣ್ (28) ಮತ್ತು ಕುಮಾರ್ ರಾಠೋಡ್ (26) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಸುಮಾರು 11.30ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ.

ನಡೆದಿದ್ದೇನು?

ಲಿಂಗೇರಿ ತಾಂಡಾದ ಓರ್ವ ಯುವಕ ಹಾಗೂ ಮಲ್ಹಾರ್ ತಾಂಡಾದ ಮೂವರು ನಿವಾಸಿಗಳು ಕಲಬುರಗಿ ಜಿಲ್ಲೆಯ ಜೇವರ್ಗಿಯಿಂದ ಯಾದಗಿರಿ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ನಿರ್ಮಾಣ ಹಂತದಲ್ಲಿರುವ ಚೆನ್ನೈ-ಸೂರತ್ ಎಕ್ಸ್‌ಪ್ರೆಸ್‌ವೇನಲ್ಲಿ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಗೋಡೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ತೀವ್ರತೆಗೆ ಕಾರು ಜಖಂಗೊಂಡಿದ್ದು, ಅದರಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಅವರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಸಂಪಾದಕರು (Editor)

ಕರ್ನಾಟಕದ ರಾಜಕೀಯ, ಆಡಳಿತ, ವಿಧಾನಸೌಧ ಹಾಗೂ ಚುನಾವಣಾ ವಿದ್ಯಮಾನಗಳನ್ನು 10+ ವರ್ಷಗಳಿಂದ ವರದಿ ಮಾಡುತ್ತಿರುವ ಹಿರಿಯ ಪತ್ರಕರ್ತರು. Senior Political Correspondent covering Karnataka state politics, governance, and policy with over a decade of journalistic experience.