ಬೆಂಗಳೂರು: ನಾಡಿನಾದ್ಯಂತ ದಸರಾ ಹಾಗೂ ವಿಜಯದಶಮಿ ಹಬ್ಬದ ಸಂಭ್ರಮ ಮನೆಮಾಡಿದೆ.
ಸ್ಯಾಂಡಲ್‌ವುಡ್‌ನ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಮನೆಯಲ್ಲೂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗಿದೆ.
ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಹಾಗೂ ಮಕ್ಕಳಾದ ರಣ್ವಿತ್ ಶೆಟ್ಟಿ ಮತ್ತು ರಾಧ್ಯಾ ಶೆಟ್ಟಿ ಅವರೊಂದಿಗೆ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಕುಟುಂಬದೊಂದಿಗೆ ವಿಜಯದಶಮಿ ಆಚರಿಸಿದ ಕ್ಷಣಗಳ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳಿಗೆ ದಸರಾ ಹಾಗೂ ವಿಜಯದಶಮಿಯ ಶುಭಾಶಯಗಳನ್ನು ತಿಳಿಸಿದ್ದಾರೆ.
ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿ, ಬಿಡುವಿಲ್ಲದ ಕೆಲಸದ ನಡುವೆಯೂ ಕುಟುಂಬದೊಂದಿಗೆ ಹಬ್ಬಗಳನ್ನು ಆಚರಿಸುವ ಮೂಲಕ ಗಮನ ಸೆಳೆದಿದ್ದಾರೆ. ಅವರ ಕುಟುಂಬದ ಹಬ್ಬದ ಸಂಭ್ರಮದ ವಿಡಿಯೋ ಅಭಿಮಾನಿಗಳ ಗಮನ ಸೆಳೆಯುತ್ತಿದೆ.
