ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ (PG Medical) ಕೋರ್ಸ್‌ಗಳ ಪ್ರವೇಶಾತಿಗೆ ಸಂಬಂಧಿಸಿದ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ.
ಒಟ್ಟು 4,388 ಸೀಟುಗಳ ಪೈಕಿ 3,268 ಸೀಟುಗಳನ್ನು ಅಭ್ಯರ್ಥಿಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ನವೆಂಬರ್ 11ರವರೆಗೆ ತಮ್ಮ ಆಯ್ಕೆಗಳನ್ನು (ಚಾಯ್ಸ್) ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಚಾಯ್ಸ್-1 ಮತ್ತು ಚಾಯ್ಸ್-2 ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ನವೆಂಬರ್ 11ರವರೆಗೆ ಚಲನ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ನವೆಂಬರ್ 12ರೊಳಗೆ ನಿಗದಿತ ಶುಲ್ಕವನ್ನು ಪಾವತಿಸಬೇಕು ಎಂದು ಕೆಇಎ ಸೂಚಿಸಿದೆ.
ಇನ್ನು ಚಾಯ್ಸ್-1 ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಶುಲ್ಕ ಪಾವತಿಸಿದ ಬಳಿಕ ನವೆಂಬರ್ 13ರೊಳಗೆ ಕೆಇಎ ಕಚೇರಿಯಲ್ಲಿ ಮೂಲ ದಾಖಲೆಗಳನ್ನು ಸಲ್ಲಿಸಬೇಕು. ನಂತರ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನವೆಂಬರ್ 14ರೊಳಗೆ ಸಂಬಂಧಪಟ್ಟ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಹೀಗಾಗಿ PG ವೈದ್ಯಕೀಯ ಕೋರ್ಸ್‌ಗಳಿಗೆ ಸೀಟು ಪಡೆದಿರುವ ಅಭ್ಯರ್ಥಿಗಳು ನಿಗದಿತ ದಿನಾಂಕಗಳೊಳಗೆ ಆಯ್ಕೆ ದಾಖಲಿಸುವುದು, ಶುಲ್ಕ ಪಾವತಿಸುವುದು ಹಾಗೂ ದಾಖಲೆ ಸಲ್ಲಿಕೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.