ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೋಷ್‌ಗೆ ತಂದೆಯ ತಿಥಿ ಕಾರ್ಯದಲ್ಲಿ ಭಾಗವಹಿಸಲು ಹೈಕೋರ್ಟ್ ಐದು ದಿನಗಳ ಕಾಲ ಅನುಮತಿ ನೀಡಿದೆ.
ಇಂದಿನಿಂದ ಐದು ದಿನಗಳವರೆಗೆ ಪ್ರತಿದಿನ ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಿಥಿ ಕಾರ್ಯದಲ್ಲಿ ಭಾಗವಹಿಸಲು ನ್ಯಾಯಾಲಯ ಅವಕಾಶ ಕಲ್ಪಿಸಿದೆ. ಈ ಸಂಬಂಧ ಪ್ರದೋಷ್ ಪರ ವಕೀಲರು 59ನೇ ಸೆಷನ್ಸ್ ನ್ಯಾಯಾಲಯಕ್ಕೆ ಹೈಕೋರ್ಟ್ ಆದೇಶದ ಪ್ರತಿಯನ್ನು ಸಲ್ಲಿಸಿದ್ದಾರೆ.
ಇದೇ ವೇಳೆ ಸೆಷನ್ಸ್ ನ್ಯಾಯಾಲಯವು ಪ್ರದೋಷ್‌ಗೆ 1 ಲಕ್ಷ ರೂಪಾಯಿ ಬಾಂಡ್ ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿದೆ.
ನ್ಯಾಯಾಲಯ ವಿಧಿಸಿರುವ ಪ್ರಮುಖ ಷರತ್ತುಗಳು:

-
ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿರುವ ಆರೋಪಿಗಳೊಂದಿಗೆ ಯಾವುದೇ ಸಂಪರ್ಕ ಮಾಡಬಾರದು.
-
ಪ್ರಕರಣದ ಸಾಕ್ಷಿಗಳೊಂದಿಗೆ ಮಾತನಾಡುವಂತಿಲ್ಲ.
-
ಪ್ರಕರಣಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಬಾರದು.
-
ತಿಥಿ ಕಾರ್ಯದಲ್ಲಿ ಭಾಗವಹಿಸುವ ಕುಟುಂಬಸ್ಥರ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು.
-
ಅಡುಗೆ ಭಟ್ಟರು ಹಾಗೂ ಪುರೋಹಿತರ ವಿವರಗಳನ್ನು ಮುಂಚಿತವಾಗಿ ನೀಡಬೇಕು.
-
ಪ್ರತಿದಿನ ಸಂಜೆ 6 ಗಂಟೆಯೊಳಗೆ ಕಡ್ಡಾಯವಾಗಿ ಜೈಲಿಗೆ ಮರಳಬೇಕು.
ನ್ಯಾಯಾಲಯ ವಿಧಿಸಿರುವ ಎಲ್ಲಾ ಷರತ್ತುಗಳನ್ನು ಪಾಲಿಸುವ ಮೂಲಕ ಪ್ರದೋಷ್ ತಿಥಿ ಕಾರ್ಯದಲ್ಲಿ ಭಾಗವಹಿಸಬೇಕಿದೆ.