ಅಕ್ಷರ ಗಾತ್ರ

ವಿಜಯಪುರದಲ್ಲಿ ಬೆಚ್ಚಿಬೀಳಿಸುವ ಘಟನೆ! ಗರ್ಭಿಣಿ ಪತ್ನಿ ಕಣ್ಣೆದುರೇ ಪತಿಗೆ ಗುಂಡಿಕ್ಕಿ ಹ*ತ್ಯೆ

Vijayapura ನಗರದಲ್ಲಿ ಗುಂಡೇಟಿಗೆ ಬಲಿಯಾದ Afzalpur ಮೂಲದ Yasin Zuberi ಗುಲಾಬಿ ಪೇಟ ಧರಿಸಿರುವುದು

ವಿಜಯಪುರ: ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆತಂದಿದ್ದ ಪತಿಯನ್ನು ಆಕೆಯ ಎದುರೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ವಿಜಯಪುರ ನಗರದ ನೆಹರು ನಗರದ ಮುಂಡೆವಾಡಿ ಆಸ್ಪತ್ರೆ ಬಳಿ ನಡೆದಿದೆ.

ಅಫಜಲಪುರ ಮೂಲದ ಯಾಸೀನ್ ಜುಬೇರಿ (34) ಕೊಲೆಯಾದ ವ್ಯಕ್ತಿ. ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆತಂದಿದ್ದ ವೇಳೆ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಯಾಸೀನ್ ಮೇಲೆ ಮೂರು ಸುತ್ತು ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದ್ದು, ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ಗಾಂಧಿಚೌಕ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಪತ್ನಿಯನ್ನು ಆಸ್ಪತ್ರೆಗೆ ಕರೆತಂದಿದ್ದ ವ್ಯಕ್ತಿಯನ್ನೇ ಗುರಿಯಾಗಿಸಿಕೊಂಡು ನಡೆದ ಈ ಗುಂಡಿನ ದಾಳಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಹತ್ಯೆಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಸಂಪಾದಕರು (Editor)

ಕರ್ನಾಟಕದ ರಾಜಕೀಯ, ಆಡಳಿತ, ವಿಧಾನಸೌಧ ಹಾಗೂ ಚುನಾವಣಾ ವಿದ್ಯಮಾನಗಳನ್ನು 10+ ವರ್ಷಗಳಿಂದ ವರದಿ ಮಾಡುತ್ತಿರುವ ಹಿರಿಯ ಪತ್ರಕರ್ತರು. Senior Political Correspondent covering Karnataka state politics, governance, and policy with over a decade of journalistic experience.