ಅಕ್ಷರ ಗಾತ್ರ

ಕೊನೆಯ ದಾರಿಯೂ ಕ್ಲೋಸ್.. ದರ್ಶನ್‌ʼಗೆ ಶಾಕ್ ಕೊಟ್ಟ ಸುಪ್ರೀಂ! ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ  ವಜಾ

ನಟ Darshan ಮತ್ತು ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಹ-ಆರೋಪಿ Pradosh ಅವರ ಚಿತ್ರ ಸಂಯೋಜನೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ದರ್ಶನ್‌ಗೆ ಸಂಬಂಧಿಸಿದಂತೆ, ಅವರ ಪತ್ನಿ ವಿಜಯಲಕ್ಷ್ಮಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಪ್ರಕರಣದ 14ನೇ ಆರೋಪಿ ಪ್ರದೂಷ್‌ನನ್ನು ಮಾಫಿ ಸಾಕ್ಷಿ ಅಥವಾ ಅಪ್ರೂವರ್ ಆಗಿ ಪರಿಗಣಿಸಿರುವುದನ್ನು ಪ್ರಶ್ನಿಸಿ ವಿಜಯಲಕ್ಷ್ಮಿ ಈ ಅರ್ಜಿ ಸಲ್ಲಿಸಿದ್ದರು.

ಪ್ರದೂಷ್ ನ್ಯಾಯಾಲಯದ ಮುಂದೆ ಮಾಫಿ ಸಾಕ್ಷಿಯಾಗಲು ಒಪ್ಪಿಕೊಂಡಿದ್ದರು. ಆದರೆ, ಸಿಆರ್‌ಪಿಸಿ ಸೆಕ್ಷನ್ 164ರ ಅಡಿಯಲ್ಲಿ ಅಗತ್ಯ ನಿಯಮಗಳನ್ನು ಸರಿಯಾಗಿ ಪಾಲಿಸದೆ ಹಾಗೂ ಸಹ-ಆರೋಪಿಗಳ ಗಮನಕ್ಕೆ ತರದೆ ಪ್ರದೂಷ್‌ಗೆ ಅಪ್ರೂವರ್ ಸ್ಥಾನಮಾನ ನೀಡಲಾಗಿದೆ ಎಂದು ವಿಜಯಲಕ್ಷ್ಮಿ ಆಕ್ಷೇಪಿಸಿದ್ದರು.

ಈ ಸಂಬಂಧ ಅವರು ಈ ಹಿಂದೆ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ, ವಿಜಯಲಕ್ಷ್ಮಿ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ವಿಚಾರಣಾ ನ್ಯಾಯಾಲಯ ಹಾಗೂ ಹೈಕೋರ್ಟ್ ತೆಗೆದುಕೊಂಡಿರುವ ನಿರ್ಧಾರದಲ್ಲಿ ಯಾವುದೇ ಕಾನೂನುಬಾಹಿರ ಅಂಶ ಕಂಡುಬರುತ್ತಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ವಾದ-ಪ್ರತಿವಾದ ಆಲಿಸಿದ ಬಳಿಕ, ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರ ಮತ್ತೊಂದು ಕಾನೂನು ಪ್ರಯತ್ನಕ್ಕೆ ಹಿನ್ನಡೆಯಾದಂತಾಗಿದೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಮನರಂಜನಾ ವರದಿಗಾರರು (Entertainment & Cinema Reporter)

NTV ಕನ್ನಡ ಸಂಪಾದಕೀಯ ತಂಡ.