ಅಕ್ಷರ ಗಾತ್ರ

ಬೆಂಗಳೂರಿನಲ್ಲಿ ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು; ವೇಲ್‌ನಿಂದ ಕುತ್ತಿಗೆ ಬಿಗಿದು ಕೊಲೆ ಶಂಕೆ

Belagavi Yaragatti Jivapura property dispute investigation site by Murgod Police
ಬೆಳಗಾವಿ ಜಿಲ್ಲೆಯ ಜೀವಾಪುರ ಗ್ರಾಮದಲ್ಲಿ ನಡೆದ ಕೃತ್ಯದ ಸ್ಥಳ ಪರಿಶೀಲನೆ ನಡೆಸಿದ ಮುರಗೋಡ ಪೊಲೀಸರು.

ಬೆಂಗಳೂರು: ವೇಲ್‌ನಿಂದ ಕುತ್ತಿಗೆ ಬಿಗಿದು ವಿವಾಹಿತ ಮಹಿಳೆಯನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿರುವ ಘಟನೆ ಬೆಂಗಳೂರಿನ ತುರಹಳ್ಳಿ ಸಮೀಪದ ಗುಬ್ಬಲಾಳದಲ್ಲಿ ನಡೆದಿದೆ.

ಯಾದಗಿರಿ ಮೂಲದ ಅಂಬಿಕಾ (21) ಮೃತಪಟ್ಟ ಮಹಿಳೆ. ಅವರು ಹಲವು ವರ್ಷಗಳಿಂದ ಪತಿ ಮಂಜುನಾಥ್ ಅವರೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದರು. ಮಂಜುನಾಥ್ ಜಿಬಿಎ ವ್ಯಾಪ್ತಿಯಲ್ಲಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಪಕ್ಕದ ಮನೆಯಲ್ಲಿದ್ದ ಸಂಬಂಧಿಯೊಬ್ಬರು ಮನೆಗೆ ತೆರಳಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ತಲಘಟ್ಟಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವೇಲ್‌ನಿಂದ ಕುತ್ತಿಗೆ ಬಿಗಿದು ಅಂಬಿಕಾ ಅವರನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸಾವಿನ ನಿಖರ ಕಾರಣ ಹಾಗೂ ಘಟನೆಯ ಹಿಂದಿನ ಹಿನ್ನೆಲೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಮೆಟ್ರೋ ಮತ್ತು ನಗರ ವರದಿಗಾರರು (City & Metro Reporter)

NTV ಕನ್ನಡ ಸಂಪಾದಕೀಯ ತಂಡ.