ಅಕ್ಷರ ಗಾತ್ರ

ಇ-ಮೇಲ್‌ನಲ್ಲಿ ಬಂತು ಕೋರ್ಟ್ ಸ್ಫೋಟಿಸುವ ಬೆದರಿಕೆ; ಪರಿಶೀಲಿಸಿದಾಗ ಸಿಕ್ಕಿದ್ದೇನು?

ಇ-ಮೇಲ್‌ನಲ್ಲಿ ಬಂತು ಕೋರ್ಟ್ ಸ್ಫೋಟಿಸುವ ಬೆದರಿಕೆ; ಪರಿಶೀಲಿಸಿದಾಗ ಸಿಕ್ಕಿದ್ದೇನು?

ಬೆಳಗಾವಿ: ಬೆಳಗಾವಿ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಕೋರ್ಟ್ ಕಟ್ಟಡವನ್ನು ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ.

ಬೆದರಿಕೆ ಇ-ಮೇಲ್ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಬೆಳಗಾವಿಯ ಮಾರ್ಕೆಟ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಬಳಿಕ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದ ಸಿಬ್ಬಂದಿಯೊಂದಿಗೆ ನ್ಯಾಯಾಲಯದ ಆವರಣದಲ್ಲಿ ತೀವ್ರ ಪರಿಶೀಲನೆ ನಡೆಸಿದ್ದಾರೆ.

ನ್ಯಾಯಾಲಯದ ಕಟ್ಟಡದ ಒಳಭಾಗ ಹಾಗೂ ಹೊರಭಾಗ ಸೇರಿದಂತೆ ಆವರಣದ ವಿವಿಧ ಸ್ಥಳಗಳಲ್ಲಿ ಕೂಲಂಕಷವಾಗಿ ತಪಾಸಣೆ ನಡೆಸಲಾಗಿದೆ. ಆದರೆ, ಪರಿಶೀಲನೆ ವೇಳೆ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಹೀಗಾಗಿ ಬಂದಿದ್ದ ಬಾಂಬ್ ಬೆದರಿಕೆ ಸಂದೇಶ ಹುಸಿ ಎಂಬುದು ದೃಢಪಟ್ಟಿದೆ.

ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿಯ ತ್ವರಿತ ಕಾರ್ಯಾಚರಣೆಯಿಂದಾಗಿ ನ್ಯಾಯಾಲಯದ ಆವರಣದಲ್ಲಿ ಉಂಟಾಗಿದ್ದ ಆತಂಕ ನಿವಾರಣೆಯಾಗಿದೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಸಂಪಾದಕರು (Editor)

ಕರ್ನಾಟಕದ ರಾಜಕೀಯ, ಆಡಳಿತ, ವಿಧಾನಸೌಧ ಹಾಗೂ ಚುನಾವಣಾ ವಿದ್ಯಮಾನಗಳನ್ನು 10+ ವರ್ಷಗಳಿಂದ ವರದಿ ಮಾಡುತ್ತಿರುವ ಹಿರಿಯ ಪತ್ರಕರ್ತರು. Senior Political Correspondent covering Karnataka state politics, governance, and policy with over a decade of journalistic experience.