ಅಕ್ಷರ ಗಾತ್ರ

ಧಾರವಾಡದ ಕುಮಾರೇಶ್ವರ ನಗರದಲ್ಲಿ ದುರಂತ: ಅರಣ್ಯ ಇಲಾಖೆ ಸಿಬ್ಬಂದಿ ಆ*ತ್ಮಹತ್ಯೆ!

Dharwad ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಅರಣ್ಯ ಇಲಾಖೆ ಸಿಬ್ಬಂದಿ Vithal Joni ಅವರ ಭಾವಚಿತ್ರ

ಧಾರವಾಡ: ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಕುಮಾರೇಶ್ವರ ನಗರದಲ್ಲಿ ನಡೆದಿದೆ.

ವಿಠಲ್ ಜೋನಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅವರು ಕಳೆದ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ವಿಠಲ್ ಅವರು ಈ ಹಿಂದೆ ಅರಣ್ಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ಘಟನೆಯ ಮಾಹಿತಿ ತಿಳಿದು ಶವವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ವಿಠಲ್ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಸಂಪಾದಕರು (Editor)

ಕರ್ನಾಟಕದ ರಾಜಕೀಯ, ಆಡಳಿತ, ವಿಧಾನಸೌಧ ಹಾಗೂ ಚುನಾವಣಾ ವಿದ್ಯಮಾನಗಳನ್ನು 10+ ವರ್ಷಗಳಿಂದ ವರದಿ ಮಾಡುತ್ತಿರುವ ಹಿರಿಯ ಪತ್ರಕರ್ತರು. Senior Political Correspondent covering Karnataka state politics, governance, and policy with over a decade of journalistic experience.