ಅಕ್ಷರ ಗಾತ್ರ

ತುಂಗಾನದಿಯಲ್ಲಿ ದುರಂತ; ಬೆಂಗಳೂರಿನ ನಾಲ್ವರು ಕಾನೂನು ವಿದ್ಯಾರ್ಥಿಗಳು ನೀರುಪಾಲು!

ಶಿವಮೊಗ್ಗದ ತೀರ್ಥಹಳ್ಳಿ ಬಳಿ ತುಂಗಾನದಿಯಲ್ಲಿ ದುರಂತ ನಡೆದಿದೆ. ಬೆಂಗಳೂರಿನ ಕತ್ರಿಗುಪ್ಪೆಯ ನಾಲ್ವರು ಯುವಕರು ನದಿಯಲ್ಲಿ ಮುಳುಗಿದ್ದು, ಶೋಧ ಕಾರ್ಯಾಚರಣೆ ತೀವ್ರಗೊಂಡಿದೆ.

Tunga River near Mahishi Thirthahalli in Shivamogga Karnataka
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿ ಸಮೀಪ ಹರಿಯುವ ತುಂಗಾನದಿ.

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿ ಸಮೀಪದ ತುಂಗಾನದಿಯಲ್ಲಿ ಬೆಂಗಳೂರಿನಿಂದ ಬಂದಿದ್ದ ನಾಲ್ವರು ಯುವಕರು ನೀರುಪಾಲಾಗಿರುವ ದುರಂತ ಘಟನೆ ನಡೆದಿದೆ.

ನಾಪತ್ತೆಯಾಗಿದ್ದ ನಾಲ್ವರಲ್ಲಿ ನಕುಲ್ ಎಂಬುವವರ ಮೃತದೇಹ ಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಕಾರ್ತಿಕ್ (31), ನಕುಲ್ (19), ಪವನ್ (30) ಹಾಗೂ ಚೇತನ್ (19) ನೀರಿನಲ್ಲಿ ಮುಳುಗಿದವರು ಎಂದು ಗುರುತಿಸಲಾಗಿದೆ. ಇವರೆಲ್ಲರೂ ಬೆಂಗಳೂರಿನ ಕತ್ರಿಗುಪ್ಪೆ ನಿವಾಸಿಗಳಾಗಿದ್ದು, ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಸ್ನೇಹಿತರ ತಂಡದೊಂದಿಗೆ ಶಿವಮೊಗ್ಗಕ್ಕೆ ಬಂದಿದ್ದರು ಎನ್ನಲಾಗಿದೆ.

ಶಿವಮೊಗ್ಗದಿಂದ ಗೂಗಲ್ ಮ್ಯಾಪ್‌ನಲ್ಲಿ ಸ್ಥಳವೊಂದನ್ನು ಹುಡುಕಿಕೊಂಡು ಎರಡು ಟಿಟಿ ವಾಹನಗಳಲ್ಲಿ ತೀರ್ಥಹಳ್ಳಿ ಕಡೆಗೆ ತೆರಳಿದ್ದರು. ಈ ವೇಳೆ ಮಹಿಷಿ ಸಮೀಪ ತುಂಗಾನದಿಗೆ ಇಳಿದಿದ್ದಾರೆ. ಅವರಲ್ಲಿ ಒಬ್ಬರು ನೀರಿನಲ್ಲಿ ಮುಳುಗುತ್ತಿದ್ದಂತೆ ರಕ್ಷಿಸಲು ಮುಂದಾದ ಉಳಿದ ಮೂವರೂ ನೀರುಪಾಲಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈಶ್ವರ್ ಮಲ್ಪೆ ಕೂಡ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯಕ್ಕೆ ನೆರವಾಗುತ್ತಿದ್ದಾರೆ.

ನಾಲ್ವರು ಯುವಕರ ದುರಂತ ಘಟನೆ ಸ್ಥಳೀಯರಲ್ಲಿ ಹಾಗೂ ಕುಟುಂಬಸ್ಥರಲ್ಲಿ ತೀವ್ರ ಆಘಾತ ಮೂಡಿಸಿದೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಸಂಪಾದಕರು (Editor)

ಕರ್ನಾಟಕದ ರಾಜಕೀಯ, ಆಡಳಿತ, ವಿಧಾನಸೌಧ ಹಾಗೂ ಚುನಾವಣಾ ವಿದ್ಯಮಾನಗಳನ್ನು 10+ ವರ್ಷಗಳಿಂದ ವರದಿ ಮಾಡುತ್ತಿರುವ ಹಿರಿಯ ಪತ್ರಕರ್ತರು. Senior Political Correspondent covering Karnataka state politics, governance, and policy with over a decade of journalistic experience.