ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಮತ್ತೊಂದು ಆಘಾತಕಾರಿ ಬೆಳವಣಿಗೆ ನಡೆದಿದೆ. 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕೊಳತ್ತೂರು ಕ್ಷೇತ್ರದಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಸೋಲಿಸಿದ್ದ ತಮಿಳಗ ವೆಟ್ರಿ ಕಳಗಂ (TVK) ಶಾಸಕ ವಿಎನ್ ಬಾಬು (75) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕೊನೆಯುಸಿರೆಳೆದಿದ್ದಾರೆ.
ವಿಎನ್ ಬಾಬು ಅವರು ಕಳೆದ ಹಲವು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಎಂಜಿಎಂ ಹೆಲ್ತ್ಕೇರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 2.24ಕ್ಕೆ ಅವರು ನಿಧನರಾಗಿದ್ದಾರೆ.
ಆಸ್ಪತ್ರೆಯಿಂದ ಸಾವಿನ ಅಧಿಕೃತ ದೃಢೀಕರಣ
ವಿಎನ್ ಬಾಬು ಅವರ ನಿಧನದ ಕುರಿತು ಆಸ್ಪತ್ರೆಯು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.

ಸ್ಟಾಲಿನ್ ಸೋಲಿಸಿದ್ದ ಟಿವಿಕೆ ಶಾಸಕ
2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕೊಳತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ವಿಎನ್ ಬಾಬು, ಡಿಎಂಕೆ ನಾಯಕ ಹಾಗೂ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಸೋಲಿಸುವ ಮೂಲಕ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದ್ದರು.
ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಕ್ಷೇತ್ರವಾಗಿರುವ ಕೊಳತ್ತೂರಿನಲ್ಲಿ ಸ್ಟಾಲಿನ್ ಅವರ ಸೋಲು ಚುನಾವಣೆಯ ಪ್ರಮುಖ ಬೆಳವಣಿಗೆಗಳಲ್ಲಿ ಒಂದಾಗಿತ್ತು. ಇದೀಗ ಕ್ಷೇತ್ರದ ಟಿವಿಕೆ ಶಾಸಕ ವಿಎನ್ ಬಾಬು ಅವರ ನಿಧನದಿಂದ ರಾಜಕೀಯ ವಲಯದಲ್ಲಿ ಶೋಕ ವ್ಯಕ್ತವಾಗಿದೆ.