ಅಕ್ಷರ ಗಾತ್ರ

ಬೆಂಗಳೂರಿನಲ್ಲಿ ಕಳ್ಳರೆಂದು ಇಬ್ಬರ ಮೇಲೆ ಹ*ಲ್ಲೆ! 10 ಜನರ ವಿರುದ್ಧ FIR

ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರ ಮೇಲೆ ಹಲ್ಲೆ ನಡೆದ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು

ಬೆಂಗಳೂರು: ಕಳ್ಳರೆಂದು ತಪ್ಪಾಗಿ ಆರೋಪಿಸಿ ಇಬ್ಬರು ಯುವಕರ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ 10 ಜನರ ವಿರುದ್ಧ ಬೆಂಗಳೂರಿನ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ವಾಹನಕ್ಕೆ ಅಡ್ಡ ಬಂದ ವಿಚಾರಕ್ಕೆ ಶಾಹಿದ್ (19) ಮತ್ತು ಫರ್ದೀನ್ ಪಾಷಾ ನಡುವೆ ಜಗಳ ಶುರುವಾಗಿತ್ತು. ಈ ವೇಳೆ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ಇಬ್ಬರನ್ನೂ ಕಳ್ಳರೆಂದು ಬಿಂಬಿಸಿದ್ದಾನೆ ಎನ್ನಲಾಗಿದೆ.

ಇದನ್ನೇ ನಂಬಿದ ಸ್ಥಳೀಯರು ಇಬ್ಬರನ್ನೂ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದಾರೆ. ಈ ಪೈಕಿ ಶಾಹಿದ್ ಮೇಲೆ ಗಂಭೀರವಾಗಿ ಹಲ್ಲೆ ನಡೆಸಲಾಗಿದ್ದು, ಆತನ ಮೊಬೈಲ್ ಫೋನ್‌ನ್ನೂ ಪುಡಿಗೈಯಲಾಗಿದೆ ಎಂದು ಆರೋಪಿಸಲಾಗಿದೆ.

ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಘಟನೆಯ ಸಂಪೂರ್ಣ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ ಎನ್ನಲಾಗಿದೆ. ಹಲ್ಲೆಗೊಳಗಾದ ಶಾಹಿದ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳ್ಳರೆಂಬ ಆರೋಪದ ಹಿನ್ನೆಲೆ ಮತ್ತು ಹಲ್ಲೆಯಲ್ಲಿ ಭಾಗಿಯಾದವರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಮೆಟ್ರೋ ಮತ್ತು ನಗರ ವರದಿಗಾರರು (City & Metro Reporter)

NTV ಕನ್ನಡ ಸಂಪಾದಕೀಯ ತಂಡ.