ಅಕ್ಷರ ಗಾತ್ರ

ಉಡುಪಿ ಶ್ರೀಕೃಷ್ಣ ಮಠಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭೇಟಿ: ಶ್ರೀಕೃಷ್ಣನ ದರ್ಶನ ಪಡೆದು ವಿಶೇಷ ಪ್ರಾರ್ಥನೆ

ಉಡುಪಿ ಶ್ರೀಕೃಷ್ಣ ಮಠಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭೇಟಿ: ಶ್ರೀಕೃಷ್ಣನ ದರ್ಶನ ಪಡೆದು ವಿಶೇಷ ಪ್ರಾರ್ಥನೆ

ಉಡುಪಿ: ಕೇಂದ್ರದ ಭಾರೀ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರು, ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಮಠದಲ್ಲಿ ಸಚಿವರನ್ನು ಬರಮಾಡಿಕೊಂಡ ಪರ್ಯಾಯ ಪೀಠಾಧೀಶರು ಫಲಮಂತ್ರಾಕ್ಷತೆ ನೀಡಿ ಅನುಗ್ರಹಿಸಿದರು. ಶ್ರೀಕೃಷ್ಣ ಮಠದ ಧಾರ್ಮಿಕ ಪರಂಪರೆ ಹಾಗೂ ಪರ್ಯಾಯ ಸಂಪ್ರದಾಯದ ಹಿನ್ನೆಲೆ ಕುಮಾರಸ್ವಾಮಿ ಅವರ ಭೇಟಿ ಗಮನ ಸೆಳೆಯಿತು.

ಈ ಸಂದರ್ಭದಲ್ಲಿ ಶಿರೂರು ಮಠದ ದಿವಾನ ಉದಯ ಕುಮಾರ್ ಸರಳತ್ತಾಯ, ಪಾರುಪತ್ಯೆದಾರ ಸುದರ್ಶನ್ ಭಟ್ ಕಲ್ಯ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ, ಉಡುಪಿ ಬಿಜೆಪಿಯ ಮಧುಕರ್ ಮುದ್ರಾಡಿ ಹಾಗೂ ಜೆಡಿಎಸ್ ಮುಖಂಡ ವಾಸುದೇವ ರಾವ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಸಂಪಾದಕರು (Editor)

ಕರ್ನಾಟಕದ ರಾಜಕೀಯ, ಆಡಳಿತ, ವಿಧಾನಸೌಧ ಹಾಗೂ ಚುನಾವಣಾ ವಿದ್ಯಮಾನಗಳನ್ನು 10+ ವರ್ಷಗಳಿಂದ ವರದಿ ಮಾಡುತ್ತಿರುವ ಹಿರಿಯ ಪತ್ರಕರ್ತರು. Senior Political Correspondent covering Karnataka state politics, governance, and policy with over a decade of journalistic experience.