ಬೆಂಗಳೂರು: ನಟ ದರ್ಶನ್ ಎದುರಿಸುತ್ತಿರುವ ಸಂಕಷ್ಟಗಳು ದೂರವಾಗಲಿ, ಇಷ್ಟಾರ್ಥಗಳು ನೆರವೇರಲಿ ಎಂದು ಅವರ ಪತ್ನಿ ವಿಜಯಲಕ್ಷ್ಮಿ ದರ್ಗಾ ಮೊರೆ ಹೋಗಿದ್ದಾರೆ. ಬೆಂಗಳೂರಿನ ಒಟಿಸಿ ರಸ್ತೆಯಲ್ಲಿರುವ ದರ್ಗಾಕ್ಕೆ ಭೇಟಿ ನೀಡಿದ ಅವರು ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದ್ದಾರೆ.
ದರ್ಶನ್ ಜೈಲಿನಲ್ಲಿದ್ದ ಸಂದರ್ಭದಲ್ಲಿ ಅವರನ್ನು ಹೊರತರಲು ವಿಜಯಲಕ್ಷ್ಮಿ ಹಲವು ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಇದೀಗ ದರ್ಗಾಕ್ಕೂ ತೆರಳಿ ಪ್ರಾರ್ಥನೆ ಸಲ್ಲಿಸಿರುವುದು ಗಮನ ಸೆಳೆದಿದೆ.
ಇತ್ತೀಚೆಗೆ ವಿಡಿಯೋ ಕಾಲ್ನಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಮಾತನಾಡಿಕೊಂಡಿದ್ದ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಈ ಬೆಳವಣಿಗೆಯ ಬಳಿಕ ವಿಜಯಲಕ್ಷ್ಮಿ ಮೌನವಾಗಿದ್ದರು ಎನ್ನಲಾಗಿದೆ. ಇದೀಗ ದರ್ಗಾಕ್ಕೆ ಭೇಟಿ ನೀಡಿರುವುದು ಮತ್ತೆ ಸುದ್ದಿಯಾಗಿದೆ.
ಧನ್ವೀರ್ ಜೊತೆಗಿನ ವಿವಾದದ ನಡುವೆ ವಿಜಯಲಕ್ಷ್ಮಿ ಪ್ರಾರ್ಥನೆ

ಇತ್ತೀಚಿನ ದಿನಗಳಲ್ಲಿ ವಿಜಯಲಕ್ಷ್ಮಿ ಮತ್ತು ನಟ ಧನ್ವೀರ್ ನಡುವೆ ವಾಗ್ವಾದ ನಡೆದಿತ್ತು. ಇಬ್ಬರ ನಡುವಿನ ಮಾತಿನ ಚಕಮಕಿ ಹಾಗೂ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಧನ್ವೀರ್ ವಿರುದ್ಧ ಮೂರು ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿದ್ದವು.
ಈ ಪ್ರಕರಣದಲ್ಲಿ ಧನ್ವೀರ್ಗೆ ಕರ್ನಾಟಕ ಹೈಕೋರ್ಟ್ನಿಂದ ತಾತ್ಕಾಲಿಕ ರಿಲೀಫ್ ದೊರೆತಿದೆ. ಅವರ ವಿರುದ್ಧ ದಾಖಲಾಗಿದ್ದ ಮೂರು ಎಫ್ಐಆರ್ಗಳ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು.
ದರ್ಶನ್ ಪ್ರಕರಣದ ಬೆಳವಣಿಗೆಗಳು, ವಿಜಯಲಕ್ಷ್ಮಿ ಮತ್ತು ಧನ್ವೀರ್ ನಡುವಿನ ವಿವಾದದ ನಡುವೆ ಇದೀಗ ವಿಜಯಲಕ್ಷ್ಮಿ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿರುವುದು ಚರ್ಚೆಗೆ ಕಾರಣವಾಗಿದೆ.