ಅಕ್ಷರ ಗಾತ್ರ

‘ಪ್ರೇಮದ ಊರಲಿ’ OTT ಗೆ ಲಗ್ಗೆ ಇಡೋದು ಯಾವಾಗ? ಕೊನೆಗೂ ಸ್ಪಷ್ಟನೆ ನೀಡಿದ ಚಿತ್ರತಂಡ!

ಪ್ರೇಮದ ಊರಲಿ ಚಿತ್ರದ ಪೋಸ್ಟರ್‌ನಲ್ಲಿ ಶ್ರೀರಾಮ್, ತಪಸ್ವಿನಿ ಪೂಣಚ್ಚ, ರಮಿಕಾ ಶಿವು ಮತ್ತು ರಂಗಾಯಣ ರಘು

ಕನ್ನಡದ ‘ಪ್ರೇಮದ ಊರಲಿ’ ಸಿನಿಮಾ ಪ್ರೇಕ್ಷಕರ ಮನಗೆಲ್ಲುತ್ತಿದ್ದು, ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಸುಂದರವಾದ ಪ್ರೇಮಕಥೆ ಹೊಂದಿರುವ ಈ ಚಿತ್ರದಲ್ಲಿ ಶ್ರೀರಾಮ್, ತಪಸ್ವಿನಿ ಪೂಣಚ್ಚ, ರಮಿಕಾ ಶಿವು ಹಾಗೂ ರಂಗಾಯಣ ರಘು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಮನೋಜ್ ಕುಮಾರ್ ನಿರ್ದೇಶನದ ಈ ಸಿನಿಮಾದ ಒಟಿಟಿ ಮತ್ತು ಕಿರುತೆರೆ ಪ್ರಸಾರದ ಬಗ್ಗೆ ಇದೀಗ ಚರ್ಚೆ ಶುರುವಾಗಿದೆ.

ಸಿನಿಮಾ ಯಾವಾಗ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ? ಯಾವ ಟಿವಿ ವಾಹಿನಿಯಲ್ಲಿ ಪ್ರಸಾರವಾಗಲಿದೆ? ಎಂದು ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ. ಈ ನಡುವೆ ಚಿತ್ರದ ಒಟಿಟಿ ಹಕ್ಕುಗಳನ್ನು ಸ್ಥಳೀಯ ಡಿಜಿಟಲ್ ವೇದಿಕೆಯೊಂದು ಖರೀದಿಸಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಆದರೆ, ಈ ಸುದ್ದಿಗಳಿಗೆ ಚಿತ್ರತಂಡ ಇದೀಗ ಸ್ಪಷ್ಟನೆ ನೀಡಿದೆ.

ಚಿತ್ರಮಂದಿರಗಳೇ ನಮ್ಮ ಮೊದಲ ಆದ್ಯತೆ!

‘ಪ್ರೇಮದ ಊರಲಿ’ ಚಿತ್ರದ ಟಿವಿ ಹಾಗೂ ಒಟಿಟಿ ಪ್ರಸಾರ ಹಕ್ಕುಗಳ ಕುರಿತು ಚಿತ್ರತಂಡ ಅಧಿಕೃತ ಪೋಸ್ಟ್ ಹಂಚಿಕೊಂಡಿದೆ. ಪ್ರೇಕ್ಷಕರ ಪ್ರೀತಿ, ಅಭಿಮಾನ ಮತ್ತು ಬೆಂಬಲದೊಂದಿಗೆ ಸಿನಿಮಾ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ ಎಂದು ತಿಳಿಸಿದೆ.

ಅಲ್ಲದೆ, ಚಿತ್ರದ ಡಿಜಿಟಲ್ ಮತ್ತು ಸ್ಯಾಟಲೈಟ್ ಪ್ರಸಾರ ಹಕ್ಕುಗಳ ವಿಚಾರದಲ್ಲಿ ಯಾವುದೇ ಸಂಸ್ಥೆ ಅಥವಾ ವೇದಿಕೆಯೊಂದಿಗೆ ಈವರೆಗೆ ಒಪ್ಪಂದ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದೆ. ಒಟಿಟಿ ಅಥವಾ ಟಿವಿ ಪ್ರಸಾರಕ್ಕೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಬದ್ಧತೆಯನ್ನೂ ನೀಡಿಲ್ಲ ಎಂದು ತಿಳಿಸಿದೆ.

ಒಟಿಟಿ ಬಿಡುಗಡೆ ದಿನಾಂಕ ಇನ್ನೂ ನಿಗದಿಯಾಗಿಲ್ಲ!

ಸದ್ಯಕ್ಕೆ ‘ಪ್ರೇಮದ ಊರಲಿ’ ಸಿನಿಮಾವನ್ನು ಒಟಿಟಿ ಅಥವಾ ಕಿರುತೆರೆಯಲ್ಲಿ ಪ್ರಸಾರ ಮಾಡುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಪ್ರಕಟಿಸುವುದಾದರೆ ಚಿತ್ರತಂಡವೇ ನೇರವಾಗಿ ತಿಳಿಸಲಿದೆ ಎಂದು ಹೇಳಿದೆ.

ಹೀಗಾಗಿ, ‘ಪ್ರೇಮದ ಊರಲಿ’ ಸಿನಿಮಾದ ಒಟಿಟಿ ಬಿಡುಗಡೆ ದಿನಾಂಕ ಅಥವಾ ಟಿವಿ ಪ್ರಸಾರದ ಬಗ್ಗೆ ಸದ್ಯಕ್ಕೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ. ಪ್ರೇಕ್ಷಕರು ವದಂತಿಗಳನ್ನು ನಂಬದೆ, ಚಿತ್ರತಂಡದ ಅಧಿಕೃತ ಪ್ರಕಟಣೆಗಾಗಿ ಕಾಯಬೇಕಿದೆ.

ಚಿತ್ರಮಂದಿರಗಳಲ್ಲಿ ಸಿನಿಮಾವನ್ನು ವೀಕ್ಷಿಸಿ ಬೆಂಬಲಿಸುತ್ತಿರುವ ಪ್ರತಿಯೊಬ್ಬ ಪ್ರೇಕ್ಷಕರಿಗೂ ಚಿತ್ರತಂಡ ಧನ್ಯವಾದ ತಿಳಿಸಿದೆ. ನಿಮ್ಮ ಪ್ರೀತಿಯೇ ಚಿತ್ರದ ನಿಜವಾದ ಗೆಲುವು ಎಂಬ ಸಂದೇಶವನ್ನೂ ಹಂಚಿಕೊಂಡಿದೆ.

ಲೈವ್

NTV ಕನ್ನಡ 24×7 ಸುದ್ದಿ

ಪೂರ್ಣವಾಗಿ ವೀಕ್ಷಿಸಿ
ಬರಹ

ಮನರಂಜನಾ ವರದಿಗಾರರು (Entertainment & Cinema Reporter)

NTV ಕನ್ನಡ ಸಂಪಾದಕೀಯ ತಂಡ.